Sunday, August 24, 2025
Google search engine
HomeUncategorizedಬಿ.ಸಿ ಪಾಟೀಲ್ ಗೃಹದಲ್ಲಿ ಅಂಬೇಡ್ಕರ್ ಜಯಂತಿ : 'ನನಗೆ ಮತ್ತೊಮ್ಮೆ ಅವಕಾಶ ಕಲ್ಪಿಸಿ' ಎಂದ ಕೌರವ

ಬಿ.ಸಿ ಪಾಟೀಲ್ ಗೃಹದಲ್ಲಿ ಅಂಬೇಡ್ಕರ್ ಜಯಂತಿ : ‘ನನಗೆ ಮತ್ತೊಮ್ಮೆ ಅವಕಾಶ ಕಲ್ಪಿಸಿ’ ಎಂದ ಕೌರವ

ಬೆಂಗಳೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಜೈ ಭೀಮ್ ಎಂದು ಘೋಷಣೆ ಕೂಗಿ ಪುಷ್ಪನಮನ ಸಲ್ಲಿಸಿದರು.

ಹಿರೇಕೆರೂರು ಕ್ಷೇತ್ರದ ಕೃಷಿ ಸಚಿವ ಬಿ.ಸಿ ಪಾಟೀಲ್ ಗೃಹ ಕಚೇರಿಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾಕ್ಟರ್ ಬಿ. ಆರ್ ಅಂಬೇಡ್ಕರ್ ಅವರ 132ನೇ ಜನ್ಮ ದಿನವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹಿರೇಕೆರೂರು ಮಂಡಲ ಅಧ್ಯಕ್ಷರಾದ ಶಿವು ತಿಪ್ಪ ಶೆಟ್ಟಿ, ನವೀನ್, ಜಿಲ್ಲಾ ಉಪಾಧ್ಯಕ್ಷರಾದ ದೊಡ್ಡ ಗೌಡ್ರು, ಈಟೇರ್, ಎಸ್.ಎಸ್ ಪಾಟೀಲ್, ಬಿ.ಎನ್ ಬಣಕರ್ ಹಾಗೂ ಬಿಜೆಪಿ ಕಾರ್ಯಕರ್ತರು, ಮುಖಂಡರುಗಳು, ಬಿ.ಸಿ ಪಾಟೀಲ್ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿರುವ ಬಿ.ಸಿ ಪಾಟೀಲ್, ದೇಶದ ದೀನ ದಲಿತರ ಬಾಳಿನ ಭರವಸೆಯ ಬೆಳಕು, ಸಂವಿಧಾನ ರಚನೆಯ ಮೂಲಕ ಪ್ರತಿಯೊಬ್ಬರಿಗೂ ಗೌರವದ ಬದುಕು ಕಲ್ಪಿಸಿದ ಮಹಾನ್ ಪುರುಷ, ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್. ದೇಶ ನಿರ್ಮಾಣಕ್ಕೆ ಅವರು ನೀಡಿದ ಕೊಡುಗೆ ಸದಾ ಸ್ಮರಣೀಯ ಎಂದು ಹೇಳಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ‘ಕಮಲ ಅರಳುವುದು ನಿಶ್ಚಿತ’ : ಡಾ.ಕೆ ಸುಧಾಕರ್ ವಿಶ್ವಾಸ

ಮತ್ತೊಮ್ಮೆ ಅವಕಾಶ ಕಲ್ಪಿಸಿ

ಇದೇ ವೇಳೆ ಹಿರೇಕೆರೂರು ವಿಧಾನಸಭಾ ವ್ಯಾಪ್ತಿಯ ಬುರುಡಿಕಟ್ಟಿ ಗ್ರಾಮದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ. ಬಿಜೆಪಿ ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿ, ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಬೆಂಬಲ ನೀಡುವುದರ ಮೂಲಕ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಮಾಡಲು ನನಗೆ ಮತ್ತೊಮ್ಮೆ ಅವಕಾಶ ಕಲ್ಪಿಸಿ ಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಸಿಎಂ ಬೊಮ್ಮಾಯಿ ನಮನ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಮನ ಸಲ್ಲಿಸಿದ್ದಾರೆ. ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ಸ್ಮರಣೆಯಂದು ಅವರಿಗೆ ಗೌರವಪೂರ್ವಕ ನಮನಗಳು.

ಸಮಾಜದಲ್ಲಿ ಸಮಾನತೆಯನ್ನು ಪ್ರತಿಪಾದಿಸುವ ಜೊತೆಗೆ ಶೋಷಿತ ಸಮುದಾಯಗಳ ಏಳಿಗೆಗಾಗಿ ನಿರಂತರವಾಗಿ ಶ್ರಮಿಸಿದ ಡಾ.ಅಂಬೇಡ್ಕರ್ ರವರ ಸಾಧನೆ ಹಾಗೂ ದೇಶ ನಿರ್ಮಾಣಕ್ಕೆ ಅವರು ನೀಡಿದ ಕೊಡುಗೆ ಸದಾ ಸ್ಮರಣೀಯವಾಗಿರುತ್ತದೆ ಎಂದು ಬರೆದುಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments