Site icon PowerTV

ಇಂದು ಬಿಜೆಪಿಯ ಅಂತಿಮ ಪಟ್ಟಿ ರಿಲೀಸ್ : ಜಗದೀಶ್ ಶೆಟ್ಟರ್ ಗೆ ಟಿಕೆಟ್ ಸಿಗುವ ಭರವಸೆ

ಬೆಂಗಳೂರು: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡಿದ ಹಿನ್ನಲೆಯಲ್ಲಿ ಕೇಸರಿ ಪಡೆಯಲ್ಲಿ ಬಂಡಾಯದ ಬಿಸಿ ತಲೆನೋವಾಗಿದೆ.ಇದು ಬಿಜೆಪಿಗೆ ಸವಾಲಾಗಿದೆ.

ಹೌದು, ಬಿಜೆಪಿ ಮೊದಲ ಪಟ್ಟಿ ಘೋಷಣೆಯದಂತೆ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ಗೆ (Jagadish Shettar) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ಮೂರನೇ ಹಾಗೂ ಅಂತಿಮ ಪಟ್ಟಿ ಇಂದು ಪ್ರಕಟವಾಗುವ ಸಾಧ್ಯತೆಯಿದ್ದು, 12 ಕ್ಷೇತ್ರಗಳ ಪಟ್ಟಿಯನ್ನು ಹೈಕಮಾಂಡ್ ಅಂತಿಮಗೊಳಿಸಿದೆ ಎಂದು ತಿಳಿದುಬಂದಿದೆ.

ಈಗಾಗಲೇ ಬಿಜೆಪಿಯ ಹಲವು ನಾಯಕರು ಬಂಡಾಯವೇಳಲು ತೀರ್ಮಾನ ಮಾಡಿದ್ದು, ಈ ಹಿನ್ನೆಲೆಯಲ್ಲಿ ಕೆಲವೊಂದು ಲೆಕ್ಕಾಚಾರಗಳನ್ನು ಹಾಕಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇನ್ನೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಟಿಕೆಟ್ ಸಿಗುವ ಭರವಸೆಯಲ್ಲಿದ್ದಾರೆ.

Exit mobile version