Site icon PowerTV

ನಾಯಿ-ನರಿ ಮಾತಿಗೆಲ್ಲಾ ಪ್ರತಿಕ್ರಿಯಿಸಲ್ಲ : ಸಚಿವ ಸೋಮಣ್ಣ ಕಿಡಿ

ಬೆಂಗಳೂರು : ಬಿಜೆಪಿ ಹೈಕಮಾಂಡ್ ತೀರ್ಮಾನದಂತೆ ವಸತಿ ಸಚಿವ ವಿ.ಸೋಮಣ್ಣ ಅವರು ವರುಣಾ ಹಾಗೂ ಚಾಮರಾಜನಗರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದು, ಈಗಾಗಲೇ ಪ್ರಚಾರ ಕಾರ್ಯ ಶುರು ಮಾಡಿದ್ದಾರೆ.

ಚಾಮರಾಜನಗರ ಜಿಲ್ಲೆ ಪ್ರವಾಸ ಕೈಗೊಂಡಿದ್ದ ಸಚಿವ ಸೋಮಣ್ಣ, ನಾಯಿ-ನರಿ ಮಾತಿಗೆಲ್ಲಾ ನಾನು ಪ್ರತಿಕ್ರಿಯೆ ಕೊಡಲ್ಲ ಎಂದು ರುದ್ರೇಶ್ ವಿರುದ್ಧ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನನ್ನ ವಿರುದ್ಧ ನನ್ನ ಮೇಲ್ಪಟ್ಟವರು ಮಾತನಾಡಿದರೇ ನಾನು ಮಾತನಾಡುತ್ತೇನೆ. ಅದು ಬಿಟ್ಟು  ನಾಯಿ-ನರಿಗೆಲ್ಲಾ ಪ್ರತಿಕ್ರಿಯಿಸಲ್ಲ. ಆ ಥರದವರ ಬಗ್ಗೆ ನೀವು ಕೂಡ ಪ್ರಶ್ನೆ ಕೇಳಬೇಡಿ ಎಂದು ಮಾಧ್ಯಮದವರ ಮೇಲೆಯೇ ಸೋಮಣ್ಣ ಗರಂ ಆಗಿದ್ದಾರೆ.

ಇದನ್ನೂ ಓದಿ : ಬಿಜೆಪಿ, ಜೆಡಿಎಸ್ ಎಲ್ಲರಿಗೂ ನಾನೇ ಟಾರ್ಗೆಟ್ : ಸಿದ್ದರಾಮಯ್ಯ

ಬಂಡಾಯದ ವಿಚಾರ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಸೋಮಣ್ಣ, ಅದು ಪಕ್ಷದ ಆಂತರಿಕ ವಿಚಾರ. ಪಕ್ಷದ ಹಿರಿಯ ನಾಯಕರು ಎಲ್ಲವನ್ನೂ ಸೆಟರೈಟ್ ಮಾಡುತ್ತಾರೆ. ನಾನು ಏಪ್ರಿಲ್17ರಂದು ವರುಣಾ ಕ್ಷೇತ್ರದಿಂದ ಹಾಗೂ ಏಪ್ರಿಲ್ 19ರಂದು ಚಾಮರಾಜನಗರ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ನಮ್ಮ ವರಿಷ್ಟರ ಸೂಚನೆ ಮೇರೆಗೆ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ. ಜನರು ಬದಲಾವಣೆ ಬಯಸಿದ್ದಾರೆ. ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಪಕ್ಷ ಗೆಲ್ಲಲ್ಲಿದೆ. ಚುನಾವಣೆಯಲ್ಲಿ ಸೋಮಣ್ಣನೇ ಸ್ಟಾರ್ ಪ್ರಚಾರಕ, ಕಾರ್ಯಕರ್ತರೇ ಸ್ಟಾರ್ ಪ್ರಚಾರಕರು ಎಂದು ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಒಟ್ನಲ್ಲಿ, ಸಚಿವ ಸೋಮಣ್ಣ ವರುಣಾ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿರುವುದರಿಂದ ಕೈ ನಾಯಕರು ಫುಲ್ ಅಲರ್ಟ್ ಆಗಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಹ ವರುಣಾ ಕ್ಷೇತ್ರದಲ್ಲಿ ಅಬ್ಬರ ಪ್ರಚಾರ ಆರಂಭಿಸಿದ್ದಾರೆ. ಚುನಾವಣೆ ಫಲಿತಾಂಶದ ಬಳಿಕ ಇಬ್ಬರು ಹಿರಿಯ ನಾಯಕರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

Exit mobile version