Site icon PowerTV

ಬಿಜೆಪಿ ಪ್ರಚಾರಕ್ಕೆ ರಾಷ್ಟ್ರೀಯ ನಾಯಕರು ಯಾರು ಯಾರು ಬರ್ತಾರೆ ಗೊತ್ತಾ?

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ 25 ದಿನಗಳು ಮಾತ್ರ ಬಾಕಿ ಉಳಿದಿವೆ. ಈ ಬಾರಿ ಜಯಭೇರಿ ಬಾರಿಸಲು ಬಿಜೆಪಿ ಸತತ ಪ್ರಯತ್ನ ನಡೆಸುತ್ತಿದೆ ಬಿಜೆಪಿ ಪ್ರಚಾರಕ್ಕೆ ಯಾರೆಲ್ಲಾ ರಾಷ್ಟ್ರೀಯ ನಾಯಕರು ರಾಜ್ಯ ಪ್ರವಾಸ ಮಾಡಲಿದ್ದಾರೆಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ

ಹೌದು, ಬಿಜೆಪಿ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರವಾಸಗಳ ಕುರಿತು ಚರ್ಚೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹೌದು, ಪಕ್ಷದ ಕಚೇರಿಯಲ್ಲಿ ನಡೆದ ಚುನಾವಣಾ ‌ನಿರ್ವಹಣಾ ಸಮಿತಿ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ರಾಷ್ಟ್ರೀಯ ನಾಯಕರುಗಳ ಚುನಾವಣಾ ಪ್ರವಾಸಗಳ ಕುರಿತು ಸಭೆ ನಡೆಸಿದ್ದೇವೆ. ಮುಂದಿನ 20 ದಿನಗಳ ರೂಪುರೇಷೆ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದರು

ನಾವು  ಎಲ್ಲಾ ಅಭ್ಯರ್ಥಿಗಳ ಜೊತೆ ಸಂಪರ್ಕ ಇಟ್ಟುಕೊಂಡಿದ್ದೇವೆ. ಅಭ್ಯರ್ಥಿಗಳ 3ನೇ ಪಟ್ಟಿ ಶೀಘ್ರ ಬಿಡುಗಡೆಯಾಗಲಿದೆ ಎಂದರು.

ಇದನ್ನೂ ಓದಿ : ಬಿಜೆಪಿ, ಜೆಡಿಎಸ್ ಎಲ್ಲರಿಗೂ ನಾನೇ ಟಾರ್ಗೆಟ್ : ಸಿದ್ದರಾಮಯ್ಯ

ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಿವಾಸದಲ್ಲಿ ಸಭೆ ನಡೆಯುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಜಗದೀಶ್ ಶೆಟ್ಟರ್ ಸಭೆ ಎಲ್ಲಾ ಕೂಡಾ ಗೊತ್ತಿದೆ. ಅಲ್ಲದೇ ನನ್ನ ಹೆಣ ಕೂಡಾ ಬಿಜೆಪಿ ಕಚೇರಿ ಕಡೆ ಹೋಗಲ್ಲ ಎಂಬ ಲಕ್ಷ್ಮಣ ಸವದಿ ಹೇಳಿಕೆ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಸವದಿ ಸ್ವಲ್ಪ ಎಮೋಷನಲ್ ಆಗಿದ್ದಾರೆ ಎಂದು ಹೇಳಿದರು.

Exit mobile version