Site icon PowerTV

‘ಕುಮಾರಣ್ಣನನ್ನು ಸಿಎಂ’ ಮಾಡಿ ರಾಮರಾಜ್ಯಕ್ಕೆ ‘ಕೈ’ ಜೋಡಿಸೋಣ

ಬೆಂಗಳೂರು : ಕೋಲಾರದ ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಅವರ ಚುನವಣಾ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ.

ಇಂದು ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷರಾದ ಕಾಡೇನಹಳ್ಳಿ ನಾಗರಾಜ್ ಅವರ ನೇತೃತ್ವದಲ್ಲಿ ಯುವಕರನ ಸೆಳೆಯಲು ಯುವ ಮುಖಂಡರ ಸಭೆಯನ್ನು ಆಯೋಜಿಸಲಾಗಿತು. ಸಭೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು.

ಈ ವೇಳೆ ಸಮೃದ್ದಿ ಮಂಜುನಾಥ್ ಅವರಿಗೆ ಮುಳಬಾಗಿಲು ಕ್ಷೇತ್ರದ  ಪ್ರಭಾವಿ ಯುವ ಮುಖಂಡರಾದ ಕಲ್ಲುಪಲ್ಲಿ ಪ್ರಕಾಶ್ ತಮ್ಮ ಬೆಂಬಲಿಗರೊಂದಿಗೆ ನಮ್ಮ ಜೆಡಿಎಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಜೆಡಿಎಸ್​ ಸೇರ್ಪಡೆಯಾದ ಎನ್​.ಆರ್​. ಸಂತೋಷ್​​​

ಮಂಜುನಾಥ್ ಗೆಲುವಿಗೆ ಶ್ರಮಿಸುತ್ತವೆ

ಈ ವೇಳೆ ಮಾತನಾಡಿರುವ ಅವರು, ಈ ಬಾರಿ ಮುಳಬಾಗಿಲು ಕ್ಷೇತ್ರದ ಅಭ್ಯರ್ಥಿ ಸಮೃದ್ದಿ ಮಂಜುನಾಥ್ ಅವರನ್ನು ಗೆಲ್ಲಿಸಿಕೊಡಲು ಶ್ರಮಿಸುತ್ತವೆ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಸಭೆಯಲ್ಲಿ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಮಾತನಾಡಿ, ಮುಳಬಾಗಿಲು ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸಬೇಕು. ಆ ಮೂಲಕ ರಾಜ್ಯದಲ್ಲಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿ ರಾಮರಾಜ್ಯಕ್ಕೆ ಕೈ ಜೋಡಿಸೋಣ ಎಂದು ಮನವಿ ಮಾಡಿದ್ದಾರೆ.

Exit mobile version