Site icon PowerTV

ಬೆಂಗಳೂರಿನಲ್ಲಿ ‘ಕಿಂಗ್’ ಕೊಹ್ಲಿ ‘ದರ್ಬಾರ್ ‘ : ಹೊಸ ದಾಖಲೆ ನಿರ್ಮಾಣ

ಬೆಂಗಳೂರು : ಐಪಿಎಲ್ ನಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಆರ್ ಸಿಬಿ ಸ್ಟಾರ್ ಬ್ಯಾಟರ್ ಕಿಂಗ್ ಕೊಹ್ಲಿ ದೊಡ್ಡ ದಾಖಲೆ ಬರೆದಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2,500 ರನ್ ಗಳಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ವಿರಾಟ್ ಕೊಹ್ಲಿ ಹೊರತುಪಡಿಸಿ ಯಾವುದೇ ಬ್ಯಾಟರ್ ಒಂದೇ ಕ್ರೀಡಾಂಗಣದಲ್ಲಿ 2000 ರನ್ ಗಳಿಸಿಲ್ಲ.

ಕಿಂಗ್ ಕೊಹ್ಲಿ 47ನೇ ಅರ್ಧಶತಕ

ಇನ್ನೂ ಡೆಲ್ಲಿ ವಿರುದ್ಧದ ಇಂದಿನ ಪಂದ್ಯದಲ್ಲಿ ಕೊಹ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ್ದಾರೆ. 33 ಎಸೆತಗಳಲ್ಲಿ 1 ಸಿಕ್ಸರ್ ಹಾಗೂ 6 ಬೌಂಡರಿ ಮೂಲಕ ಕೊಹ್ಲಿ ಐಪಿಎಲ್ ನಲ್ಲಿ 47ನೇ ಅರ್ಧಶತಕ ಪೂರೈಸಿದರು.

ಅರ್ಧಶತಕದ ಬಳಿಕ ಕೊಹ್ಲಿ ಬಹಳ ಸಮಯ ಕ್ರೀಸ್ ನಲ್ಲಿ ನಿಲ್ಲಲಿಲ್ಲ. ಡೆಲ್ಲಿ ಬೌಲರ್ ಲಲಿತ್ ಯಾದವ್ ಅವರ ಫುಲ್ ಟಾಸ್ ಎಸೆತವನ್ನು ಸಿಕ್ಸರ್ ಬಾರಿಸಲು ಮುಂದಾಗಿ ಡೀಪ್ ಮಿಡ್ ವಿಕೆಟ್ ನಲ್ಲಿ ಯಶ್ ದುಲ್ ಗೆ ಕ್ಯಾಚ್ ನೀಡಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು.

ಇದನ್ನೂ ಓದಿ : ತಲಾ ಧೋನಿ ಹೊಸ ಮೈಲುಗಲ್ಲು : ಈ ಸಾಧನೆ ಮಾಡಿದ ಮೊದಲ ನಾಯಕ ಇವರೇ!

ಆರ್ ಸಿಬಿ ತಂಡ

ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ವನಿಂದು ಹಸರಂಗ, ವೇಯ್ನ್ ಪಾರ್ನೆಲ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್

ಡೆಲ್ಲಿ ಕ್ಯಾಪಿಟಲ್ಸ್ ತಂಡ

ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ಮನೀಶ್ ಪಾಂಡೆ, ಯಶ್ ಧುಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಅಭಿಷೇಕ್ ಪೊರೆಲ್, ಕುಲದೀಪ್ ಯಾದವ್, ಅನ್ರಿಚ್ ನೋಕಿಯಾ, ಮುಸ್ತಾಫಿಜುರ್ ರೆಹಮಾನ್

Exit mobile version