Site icon PowerTV

ಅಖಂಡ ಶ್ರೀನಿವಾಸ್ ಮೂರ್ತಿ ಕಾಂಗ್ರೆಸ್‌ಗೆ ಗುಡ್‌ಬೈ

ಬೆಂಗಳೂರು: ಚುನಾವಣೆ ಹೊತ್ತಿನಲ್ಲಿ ರಾಜೀನಾಮೆ ಭೀತಿ ಎಲ್ಲಡೆ ಹಬ್ಬುತ್ತಿದ್ದು, ರಾಷ್ಟ್ರೀಯ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದಂತೆ ಟಿಕೆಟ್ ಕೈ ತಪ್ಪಿದ ಅಭ್ಯರ್ಥಿಗಳು ಬಂಡಾಯ ಎದ್ದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆ.

ಹೌದು, ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ನ (Congress) 3ನೇ ಪಟ್ಟಿ ಬಿಡುಗಡೆಯಾಗಿದೆ. ಆದರೆ, ಈ 3 ಪಟ್ಟಿಗಳಲ್ಲೂ ಹಾಲಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಗೆ (Akhanda Srinivas Murthy) ಟಿಕೆಟ್ ನೀಡಲಾಗಿಲ್ಲ. ಇದೀಗ ಪುಲಕೇಶಿ ನಗರದ ಶಾಸಕ  ಅಖಂಡ ಶ್ರೀನಿವಾಸ್ ಮೂರ್ತಿ ಕಾಂಗ್ರೆಸ್‌ ವಿರುದ್ಧ  ಸಿಡಿದು ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಶ್ರೀನಿವಾಸ್ ಮುರ್ತಿ ಶನಿವಾರ ಈ ಬಗ್ಗೆ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿದ್ದಾರೆ. ನಿಮ್ಮ ಯಾವುದೇ ತೀರ್ಮಾನಕ್ಕೂ ನಾವು ಬದ್ಧ ಎಂದು ಕಾರ್ಯಕರ್ತರು ತಿಳಿಸಿದ್ದಾರೆ. ಭಾನುವಾರ ಅಖಂಡ ಅವರು ಸ್ಪೀಕರ್ ಕಾಗೇರಿಗೆ ರಾಜೀನಾಮೆ ಸಲ್ಲಿಸಲು ಶಿರಸಿಗೆ ತೆರಳಿದ್ದಾರೆ
ಸಿದ್ದರಾಮಯ್ಯ ಮತ್ತು ಜಮೀರ್ ಅಖಂಡ ಪರವಾಗಿ ಬ್ಯಾಟ್ ಮಾಡಿದ್ದರು. ಆದರೆ ಡಿಕೆ ಶಿವಕುಮಾರ್ ತಮ್ಮ ಅಭ್ಯರ್ಥಿಯ ಪರವಾಗಿ ಹೈಕಮಾಂಡ್ ಮುಂದೆ ಬ್ಯಾಟ್ ಬೀಸಿದ್ದರು.
Exit mobile version