Site icon PowerTV

Jagadish Shettar : ಅಧಿಕೃತವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಜಗದೀಶ್‌ ಶೆಟ್ಟರ್‌

ಶಿರಸಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನ ಎಣಿಕೆ ಶುರುವಾಗಿದೆ(Karnataka Assembly Elections 2023) ಈಗಾಗಲೇ ಪ್ರಮುಖ ಮೂರು ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಬಿಜೆಪಿಯ ಘಟಾನುಘಟಿ ನಾಯಕ ಮಾಜಿ ಡಿಸಿಎಂ ಲಕ್ಷ್ಮಣ ಸವದಿ(Laxman Savadi) ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್​ ಪಕ್ಷಕ್ಕೆ ಸೇರಿದ್ದಾರೆ.ಇದರ ಬೆನ್ನಲ್ಲೆ ಇಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್(​ Jagdish Shettar) ಬಿಜೆಪಿಗೆ​ ರಾಜೀನಾಮೆ ನೀಡಿರುವುದು, ರಾಜ್ಯ ಬಿಜೆಪಿಗೆ ಬಹಳ ದೊಡ್ಡ ಪೆಟ್ಟು ಬಿದ್ದಿದೆ.

ಹೌದು,ಇಂದು ಸ್ಪೀಕರ್ ಕಾಗೇರಿ ಭೇಟಿಯಾಗಿ ಶಾಸಕ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಧೀಕೃತವಾಗಿ ರಾಜೀನಾಮೇ ನೀಡಿದ್ದಾರೆ.

ರಾಜೀನಾಮೆ ನೀಡಿ ಮಾತನಾಡಿದ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸೇರಿ ಎಲ್ಲಾ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದೇನೆ. ನಾನು ಹುಬ್ಬಳ್ಳಿಗೆ ವಾಪಸಾಗುತ್ತೇನೆ. ನಾನು ಈ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದು ನಿಶ್ಚಿತ ಎಂದಿದ್ದಾರೆ. ಈವರೆಗೆ ಕಾಂಗ್ರೆಸ್​ ನಾಯಕರು ನನ್ನನ್ನು ಸಂಪರ್ಕಿಸಿಲ್ಲ. ಬೆಂಬಲಿಗರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಮಾಡುತ್ತೇನೆ ಎಂದರು.

Exit mobile version