Site icon PowerTV

ಪಕ್ಷ ಬಿಟ್ಟು ಹೋದವರ ವಿರುದ್ಧ ಯಡಿಯೂರಪ್ಪ ಕೆಂಡಾಮಂಡಲ : ಸವದಿ, ಶೆಟ್ಟರ್ ವಿರುದ್ಧ ವಾಗ್ದಾಳಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ಟಿಕೆಟ್ ಕೈ ತಪ್ಪಿದ ಆಕಾಂಕ್ಷಿಗಳು ಬಂಡಾಯ ಎದ್ದಿದ್ದಾರೆ. ಒಬ್ಬೊಬ್ಬರಾಗಿ ಬಿಜೆಪಿ ಪಕ್ಷಕ್ಕೆ ವಿದಾಯ ಹೇಳುತ್ತಿದ್ದಾರೆ. ಜಗದೀಶ್ ಶೆಟ್ಟರ್ ಬಿಜೆಪಿ ತೊರೆದ ಬೆನ್ನಲ್ಲೆ ಮಾಜಿ ಸಿಎ. ಬಿಎಸ್ ಯಡಿಯೂರಪ್ಪ ಇಂದು  ಸುದ್ದಿಗೋಷ್ಠಿ ನಡೆಸಿದ್ದರು.

ಹೌದು, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ಜಗದೀಶ್ ಶೆಟ್ಟರ್​ಗೆ, ಲಕ್ಷ್ಮಣ ಸವದಿಗೆ ಪಕ್ಷ ಹಲವು ಅವಕಾಶ ನೀಡಿದರು ಅವರು ದ್ರೋಹ ಮಾಡಿದ್ದಾರೆ. ಇನ್ನೂ ಸವದಿಯನ್ನು ಬಿಜೆಪಿಗೆ ಕರೆತಂದು ಶಾಸಕ, ಸಚಿವ ಮಾಡಿದ್ದೆವು. 2018ರ ವಿಧಾನಸಭಾ ಚುನಾವಣೆಯಲ್ಲಿ ಸವದಿ ಸೋತಿದ್ದರು. ಸೋತಿದ್ದ ಲಕ್ಷ್ಮಣ ಸವದಿಯನ್ನು ಡಿಸಿಎಂ ಮಾಡಿದ್ದೆವು. 10 ತಿಂಗಳ ಹಿಂದೆ ಎಂಎಲ್​ಸಿಯಾಗಿ ಮರುನೇಮಕಾತಿ ಮಾಡಿದಾಗ ಇನ್ನೂ 5 ವರ್ಷ ಅಧಿಕಾರವಧಿ ಇರುವಾಗ ಬಿಜೆಪಿ ತೊರೆದರು. ಬಿಜೆಪಿಯಲ್ಲಿ ಎಲ್ಲಾ ಸ್ಥಾನಮಾನ ಅನುಭವಿಸಿ ತೊರೆದಿದ್ದಾರೆ. ನಿಮಗೆ ಬಿಜೆಪಿ ಏನು ಅನ್ಯಾಯ ಮಾಡಿದೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಲಕ್ಷ್ಮಣ್ ಸಾವದಿಗೆ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Jagadish Shettar : ಅಧಿಕೃತವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಜಗದೀಶ್‌ ಶೆಟ್ಟರ್‌

ಇನ್ನೂ ಜನಸಂಘದ ಕಾಲದಿಂದಲೂ ಜಗದೀಶ್​ ಶೆಟ್ಟರ್​ ಬಿಜೆಪಿಯಲ್ಲಿದ್ದರು. ಶೆಟ್ಟರ್​ರನ್ನು ಶಾಸಕ, ಸಚಿವ, ವಿಪಕ್ಷ ನಾಯಕ, ಸಿಎಂ ಮಾಡಿದ್ದೆವು. ಜಗದೀಶ್​ ಶೆಟ್ಟರ್​ಗೆ ನಾನು, ಅನಂತಕುಮಾರ್​ ಕಾವಲಾಗಿದ್ದೆವು. ನನ್ನ ಜತೆ ಹೆಜ್ಜೆಹಾಕುವ ಜವಾಬ್ದಾರಿ ಜಗದೀಶ್ ಶೆಟ್ಟರ್​ಗೆ ಇತ್ತು. ಪಕ್ಷದ ಸಹಕಾರ ಇಲ್ಲದಿದ್ದರೆ ವ್ಯಕ್ತಿ ಎತ್ತರಕ್ಕೆ ಬೆಳೆಯಲು ಆಗಲ್ಲ. ಮಾಜಿ ಸಿಎಂ ಜಗದೀಶ್​ ಶೆಟ್ಟರ್​ಗೆ ಏನು ಕಡಿಮೆ ಮಾಡಿದ್ದೆವು. ಶೆಟ್ಟರ್ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ, ಇದಕ್ಕೆ ಕ್ಷಮೆಯೇ ಇಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಜಗದೀಶ್‌ ಶೆಟ್ಟರ್‌ ಅವರು ಈ ರೀತಿ ಮಾಡಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದ್ರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್​ ಶಾ ಅವರ ಜೊತೆ ಚರ್ಚೆ ಮಾಡಿದ್ದೇವೆ. ಜಗದೀಶ್‌ ಶೆಟ್ಟರ್‌ ಬಿಜೆಪಿಗೆ ರಾಜೀನಾಮೆ ನೀಡಬಾರದಿತ್ತು, ಜಗದೀಶ್​ ಶೆಟ್ಟರ್​​ ಮರಳಿ ಬಿಜೆಪಿಗೆ ಬಂದರೆ ಮೊದಲಿನ ಸ್ಥಾನಮಾನ ನೀಡಲಾಗುವುದು ಎಂದು ತಿಳಿಸಿದ್ದರು.

Exit mobile version