Site icon PowerTV

ಬಿಗ್ ಶಾಕ್ : ಈಶ್ವರಪ್ಪ, ಸೋಮಣ್ಣ ಪುತ್ರರಿಗೆ ಟಿಕೆಟ್ ಮಿಸ್?

ಬೆಂಗಳೂರು : ಇಂದು ಬಿಡುಗಡೆಯಾಗಿರುವ ಬಿಜೆಪಿ ಮೂರನೇ ಪಟ್ಟಿಯಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹಾಗೂ ವಸತಿ ಸಚಿವ ವಿ.ಸೋಮಣ್ಣ ಪುತ್ರರಿಗೆ ಹೈಕಮಾಂಡ್ ಟಿಕೆಟ್ ಘೋಷಿಸಿಲ್ಲ.

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ. ಇದಲ್ಲದೆ, ಮಾನ್ವಿ ವಿಧಾನಸಭಾ ಕ್ಷೇತ್ರದ ಟಿಕೆಟ್​ ಅನ್ನೂ ಬಾಕಿ ಇರಿಸಿಕೊಂಡಿದೆ. ವಿಪರ್ಯಾಸವೆಂದರೆ ಸಚಿವ ವಿ.ಸೋಮಣ್ಣ ಪುತ್ರ ಅರುಣ್ ಸೋಮಣ್ಣಗೆ ಟಿಕೆಟ್ ಕೈತಪ್ಪಿದೆ.

ಮಾಜಿ ಸಚಿವ ಹಾಗೂ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಅವರು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರವನ್ನು ಈವರೆಗೆ ಪ್ರತಿನಿಧಿಸುತ್ತಿದ್ದರು. ಇತ್ತೀಚೆಗಷ್ಟೇ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಆದರೆ, ತಮ್ಮ ಮಗ ಕಾಂತೇಶ್​ ಈಶ್ವರಪ್ಪ ಅವರಿಗೆ ಟಿಕೆಟ್ ನೀಡಬೇಕು ಎಂದು ಹೈಕಮಾಂಡ್ ಬೇಡಿಕೆ ಇಟ್ಟಿದ್ದರು.

ಇದನ್ನೂ ಓದಿ : ನಾಳೆ ದೊಡ್ಡಬಳ್ಳಾಪುರ ಅಭ್ಯರ್ಥಿ ಧೀರಜ್ ಮುನಿರಾಜು ನಾಮಪತ್ರ ಸಲ್ಲಿಕೆ

ರಾಮದಾಸ್​ಗೂ ಟಿಕೆಟ್ ಮಿಸ್

ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಎಸ್.ಎ.ರಾಮದಾಸ್​ ಅವರಿಗೆ ಈ ಬಾರಿ ಟಿಕೆಟ್ ಮಿಸ್ ಆಗಿದೆ. ಕೃಷ್ಣರಾಜ ಕ್ಷೇತ್ರಕ್ಕೆ ಶ್ರೀವತ್ಸಗೆ ಮಣೆ ಹಾಕಲಾಗಿದೆ. ಬಿಜೆಪಿ ಇದುವರೆಗೆ 72 ಹೊಸ ಮುಖಗಳಿಗ ಮಣೆ ಹಾಕಿದೆ.

ಸಚಿವ ವಿ.ಸೋಮಣ್ಣ ಪುತ್ರ ಅರುಣ್ ಸೋಮಣ್ಣಗೆ ಕೂಡ ಟಿಕೆಟ್ ನಿರಾಕರಿಸಲಾಗಿದೆ. ಇವರು ಗೋವಿಂದರಾಜನಗರ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅಲ್ಲದೆ, ತುಮಕೂರಿನ ಗುಬ್ಬಿ ಕ್ಷೇತ್ರದ ಆಕಾಂಕ್ಷಿಯೂ ಆಗಿದ್ದರು. ಇನ್ನೂ ಮಹದೇವಪುರ ಕ್ಷೇತ್ರದ ಟಿಕೆಟ್ ಅರವಿಂದ ಲಿಂಬಾವಳಿ ಕೈತಪ್ಪಿದ್ದು, ಅವರ ಪತ್ನಿ ಮಂಜುಳಾಗೆ ಹೈಕಮಾಂಡ್ ಮಣೆಹಾಕಿದೆ.

Exit mobile version