Site icon PowerTV

Jagadish Shettar : ಜಗದೀಶ್ ಶೆಟ್ಟರ್ ಕಾಂಗ್ರೆಸ್‌ಗೆ ಸೇರ್ಪಡೆ

ಬೆಂಗಳೂರು : ಬಿಜೆಪಿಯ ಘಟಾನುಘಟಿ ನಾಯಕ ಮಾಜಿ ಡಿಸಿಎಂ ಲಕ್ಷ್ಮಣ ಸವದಿ(Laxman Savadi) ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್​ ಪಕ್ಷಕ್ಕೆ ಸೇರಿದ್ದಾರೆ.ಇದರ ಬೆನ್ನಲ್ಲೇ ಇಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್(​ Jagdish Shettar) ಬಿಜೆಪಿಗೆ​ ಗುಡ್​ ಬೈ ಹೇಳಿ ‘ಕೈ’ (Congress) ಸೇರ್ಪಡೆಯಾಗಿದ್ದಾರೆ. ಇದರಿಂದ ಬಿಜೆಪಿಗೆ ಬಹಳ ದೊಡ್ಡ ಪೆಟ್ಟು ಬಿದ್ದಿದೆ.

ಹೌದು,ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ 7ನೇ ಬಾರಿ ಸ್ಪರ್ಧಿಸಲು ಟಿಕೆಟ್ ನೀಡಲಿಲ್ಲ ಅನ್ನೋ ಕಾರಣಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಮಲ ಪಕ್ಷಕ್ಕೆ ಗುಡ್‌ ಬೈ ಹೇಳಿ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದಾರೆ.

 ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯ ಕಾಂಗ್ರೆಸ್​ ಚುನಾವಣಾ ಉಸ್ತುವಾರಿ ರಣದೀಪ್​ ಸಿಂಗ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ಹಲವರು ಅವರ ಸಮ್ಮುಖದಲ್ಲಿ ಉಪಸ್ಥಿತರಿದ್ದರು

 

Exit mobile version