Site icon PowerTV

ಜಗದೀಶ್ ಶೆಟ್ಟರ್​ನ ಅಪ್ಪಿ ಪತ್ನಿ ಶಿಲ್ಪಾ ಕಣ್ಣೀರು

ಹುಬ್ಬಳ್ಳಿ : ಕಾಂಗ್ರೆಸ್ ಸೇರ್ಪಡೆ ನಂತರ ನಿವಾಸಕ್ಕೆ ಹಿಂದಿರುಗಿದ ವೇಳೆ ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್ ಅವರ ಪತ್ನಿ ಶಿಲ್ಪಾ ಶೆಟ್ಟರ್ ಪತಿಯನ್ನ ಅಪ್ಪಿ​ ಕಣ್ಣೀರು ಹಾಕಿದ್ದಾರೆ.

ಹುಬ್ಬಳ್ಲೀಯ ಕೇಶ್ವಾಪುರದ ಮಧುರಾ ಕಾಲೋನಿಯಲ್ಲಿರುವ ನಿವಾಸದಲ್ಲಿ ಕಣ್ಣೀರು ಹಾಕಿದ್ದಾರೆ. ಈ ವೇಳೆ ಜಗದೀಶ್​ ಶೆಟ್ಟರ್​ ಕೂಡ ಭಾವುಕರಾಗಿದ್ದಾರೆ. ಜಗದೀಶ್​ ಶೆಟ್ಟರ್ ದಂಪತಿಯನ್ನು ಬೆಂಬಲಿಗರು, ಅಭಿಮಾನಿಗಳು ಸಂತೈಸಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ಜಗದೀಶ್ ಶೆಟ್ಟರ್ ಅವರು, ರಾಜ್ಯದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವ ಅವಕಾಶವಿತ್ತು. ಆದರೆ, ಕೆಲವೊಬ್ಬರಿಗೆ ಬಿಜೆಪಿ ಅಧಿಕಾರಕ್ಕೆ ಬರೋದು ಬೇಡ ಅನಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಯಡಿಯೂರಪ್ಪಗೂ ಬಿಜೆಪಿಯಲ್ಲಿ ಅಪಮಾನ ಆಗಿದೆ : ಡಿ.ಕೆ ಶಿವಕುಮಾರ್

ಪ್ರಮುಖ ನಾಯಕರ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. ನನ್ನ ವಿರುದ್ಧ ಒಂದು ವರ್ಷದಿಂದ ಷಡ್ಯಂತ್ರ ಮಾಡಿಕೊಂಡು ಬಂದಿದ್ದಾರೆ. ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ​ ಪಕ್ಷ ತೊರೆದಿದ್ದರಿಂದ ಬಿಜೆಪಿಗೆ ಹಾನಿ ಆಗಿದೆ ಎಂದು ಪರೋಕ್ಷವಾಗಿ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

.19ಕ್ಕೆ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್ ಸೇರಿದ ತಕ್ಷಣ ಪಕ್ಷ ಬೈಯ್ಯಬೇಕು ಅಂತಿಲ್ಲ. ಕೆಲ ವ್ಯಕ್ತಿಗಳಿಂದ ಹೀಗೆ ಆಗ್ತಿದೆ. ನಾನು ಏಪ್ರಿಲ್ 19ರಂದು ನಾಮಪತ್ರ ಸಲ್ಲಿಕೆ ಮಾಡ್ತೀನಿ. ನಾನು ಗೌರವದಿಂದ ನಡೆಸಿಕೊಳ್ಳಿ ಎಂದು ಹೇಳಿದ್ದೇನೆ. ನನ್ನ ಬೆಂಬಲಿಗರನ್ನು ಒತ್ತಾಯದಿಂದ ಹಿಡಿದಿಟ್ಟುಕೊಂಡಿದ್ದಾರೆ. ಉಸಿರುಗಟ್ಟೋ ವಾತವರಣದಲ್ಲಿ ಇದಾರೆ. ನನ್ನ ಬೆಂಬಲಿಗರ ನನ್ನ ಜೊತೆ ಬರ್ತಾರೆ ಎಂದು ಹೇಳಿದ್ದಾರೆ.

Exit mobile version