Site icon PowerTV

JP Nadda: ಶೆಟ್ಟರ್ ‘ಕೈ’ ಸೇರ್ಪಡೆ ಬೆನ್ನಲ್ಲೇ ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಎಂಟ್ರಿ

ಬೆಂಗಳೂರು : ಚುನಾವಣೆ ಹತ್ತಿರ ಬಂದಂತೆ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.ಹೌದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ.

ಇನ್ನೂ ಸಂಜೆ ಹುಬ್ಬಳ್ಳಿಗೆ ಆಗಮಿಸಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಯುಬಿ ಕಾಲೇಜಿನಲ್ಲಿ ಪ್ರಬುದ್ಧರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಹುಬ್ಬಳ್ಳಿಯಲ್ಲಿ ಧಾರವಾಡ ವಿಭಾಗದ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಭೆಯಲ್ಲಿ ಜೆಪಿ ನಡ್ಡಾ ಭಾಗಿಯಾಗಲಿದ್ದಾರೆ. ಸಭೆಗೆ 800 ಪ್ರಮುಖರಿಗೆ ಆಹ್ವಾನ ನೀಡಲಾಗಿದೆ.

ಇದನ್ನೂ ಓದಿ : Jagadish Shettar : ಜಗದೀಶ್ ಶೆಟ್ಟರ್ ಕಾಂಗ್ರೆಸ್‌ಗೆ ಸೇರ್ಪಡೆ

ಇನ್ನೂ ಬಿಜೆಪಿಯಲ್ಲಿ ಲಿಂಗಾಯತ ಮುಖಂಡರನ್ನು ಕಡೆಗಣನೆ ಮಾಡಲಾಗಿದೆ ಎಂಬ ಸಂದೇಶವನ್ನು ಕಾಂಗ್ರೆಸ್ ರವಾನಿಸುತ್ತಿದೆ. ಶೆಟ್ಟರ್ ಕಾಂಗ್ರೆಸ್ ಸೇರಿದ್ದರಿಂದ ಲಿಂಗಾಯತ ಮತಗಳು ಕೈ ತಪ್ಪುವ ಆತಂಕ ಬಿಜೆಪಿಗೆ ಎದುರಾಗಿದ್ದು. ಚುನಾವಣೆಯಲ್ಲಿ ಬಹುಮತದಿಂದ ಜಯಶಾಲಿಯಾಗಲು ಕೇಸರಿ ಪಡೆ ರಣತಂತ್ರ ರೂಪಿಸುತ್ತಿದೆ.

 

Exit mobile version