Site icon PowerTV

ನಾಳೆ ಸಮೃದ್ಧಿ ಮಂಜುನಾಥ್ ನಾಮಪತ್ರ ಸಲ್ಲಿಕೆ : ದೇವೇಗೌಡರ ಆಶೀರ್ವಾದ

ಬೆಂಗಳೂರು : ಕೋಲಾರ ಜಿಲ್ಲೆ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಮೃದ್ದಿ ಮಂಜುನಾಥ್​ ಅವರು ನಾಳೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡ ಅವರಿಂದ ಮುಳಬಾಗಿಲು ವಿಧಾನಸಭೆ ಕ್ಷೇತ್ರದ ಬಿ.ಫಾರಂ ಪಡೆದು ಆಶೀರ್ವಾದ ಪಡೆದಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಅವರು, ನಾಳೆ ಬೆಳಿಗ್ಗೆ 11ಗಂಟೆಗೆ ಅಂಬೇಡ್ಕರ್ ಸರ್ಕಲಿನಿಂದ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು,ಅಭಿಮಾನಿಗಳೊಂದಿಗೆ ಜೊತೆಗೂಡಿ ನಾಮಪತ್ರವನ್ನು ಸಲ್ಲಿಸಲಿದ್ದೇನೆ. ಹೀಗಾಗಿ, ಎಲ್ಲಾ ಆತ್ಮೀಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಬೆಂಬಲಿಸಿ, ಆಶೀರ್ವದಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಮಂಡ್ಯದಲ್ಲಿ ಸಾಮಾನ್ಯ ರೈತ ಮಹಿಳೆ ಸ್ಫರ್ಧೆ : ಕುಮಾರಸ್ವಾಮಿ

ಸಮೃದ್ದಿ ಮಂಜುನಾಥ್​ ಅವರು ಈಗಾಗಲೇ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಶ್ರೀ ಸೋಮೇಶ್ವರ ಸ್ವಾಮಿ ಆಶೀರ್ವಾದ ಪಡೆದು ಮುಳಬಾಗಿಲು ತಾಲ್ಲೂಕು ಕಚೇರಿಯಲ್ಲಿ ಕಾಡೇನಹಳ್ಳಿ ನಾಗರಾಜಣ್ಣ, ರಘುಪತಿ, ಡಾ.ಸಿ.ಎನ್.ಪ್ರಕಾಶ್, ಮುರಳಿ ಹಾಗೂ ಇನ್ನಿತರ ಮುಖಂಡರ ಸಮುಖದಲ್ಲಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದರು.

ಈಗಾಗಲೇ ಮುಳಬಾಗಿಲಿನಲ್ಲಿ ಚುನಾವಣಾ ಪ್ರಚಾರ ಮುಂದುವರೆದಿದ್ದು, ಸಮೃದ್ದಿ ಮಂಜುನಾಥ್ ಮತಯಾಚನೆಗೆ ಎಲ್ಲೆಡೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಇಂದು ನಂಗಲಿ ಸವಿತಾ ಸಮಾಜದ ಕಮಟಿಯವರು ಅವರ ಗೃಹದಲ್ಲಿ ಭೇಟಿ ನೀಡಿದ್ದು, ಈ ಬಾರಿ ಸಮಾಜದವರೆಲ್ಲರೂ ತಮಗೆ ಆಶೀರ್ವದಿಸಬೇಕು ಎಂದು ಮನವಿ ಮಾಡಿದ್ದಾರೆ.

Exit mobile version