Site icon PowerTV

‘ಸೋಮಣ್ಣನನ್ನು ಹರಕೆಯ ಕುರಿ’ ಮಾಡಿದ್ದಾರೆ : ಸಿದ್ದು ಲೇವಡಿ

ಬೆಂಗಳೂರು : ಬಿಜೆಪಿ ನಾಯಕರು ಸಚಿವ ವಿ.ಸೋಮಣ್ಣ ಅವರನ್ನು ಹರಕೆಯ ಕುರಿ ಮಾಡಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಚಿವ ವಿ.ಸೋಮಣ್ಣ ಸ್ಪರ್ಧೆಗೆ ಬಿ.ಎಲ್.ಸಂತೋಷ ಒತ್ತಡವೇ ಕಾರಣ. ದುಡ್ಡಿರುವ ಒಬ್ಬನು ಬೇಕು ಎಂದು ಇಲ್ಲಿಗೆ ತಂದು ಹಾಕಲಾಗಿದೆ ಎಂದು ಹೇಳಿದ್ದಾರೆ.

ಸೋಮಣ್ಣ ಹೇಳಿ ಕೇಳಿ ಹೊರ ಜಿಲ್ಲೆಯವನು. ಸೋಮಣ್ಣನಿಗೆ ವರುಣ ಕ್ಷೇತ್ರದ ಬಗ್ಗೆ ಏನು ಗೊತ್ತಿದೆ. ರಾಮನಗರದಲ್ಲಿ ಹುಟ್ಟಿ ಬೆಂಗಳೂರಿನಲ್ಲಿ ರಾಜಕೀಯ ಮಾಡಿದವನು ಸೋಮಣ್ಣ. ಸೋಮಣ್ಣಗು ವರುಣಗು ಏನು ಸಂಬಂಧ? ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ : ನಾನೇನು ಹೋಗಿ ಜೈಲಿನಲ್ಲಿ ಇರಲೇ? : ಬಿಜೆಪಿ ನಾಯಕರಿಗೆ ಶೆಟ್ಟರ್ ಪ್ರಶ್ನೆ

ಒಂದೇ ಒಂದು ಮನೆ ಕೊಟ್ಟಿಲ್ಲ

ಸೋಮಣ್ಣ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗ ವರುಣಗೆ ಒಂದೇ ಒಂದು ಮನೆ ಕೊಟ್ಟಿದ್ದನಾ? ಈಗ ಬಂದು ಅಭಿವೃದ್ಧಿ ಬಗ್ಗೆ ಮಾತನಾಡುತ್ತಾನೆ. ನನ್ನ ವರುಣ ಸಂಬಂಧವನ್ನು ಕಿತ್ತು ಹಾಕಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ನನ್ನ ಬಗ್ಗೆ ವರುಣ ಜನಕ್ಕೆ ಅಪಾರ ಪ್ರೀತಿ ವಿಶ್ವಾಸ ಇದೆ. ಯಾರೇ ಬರಲಿ, ಯಾರೇ ಅಭ್ಯರ್ಥಿಗಳನ್ನು ಬದಲಾಯಿಸಲಿ, ಏನೇ ಆದರೂ ನನ್ನ ಗೆಲ್ಲುವು ನಿಶ್ಚಿತ. ವರುಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದಗಳ ಬಗ್ಗೆ ಎರಡು ಮೂರು ದಿನದಲ್ಲಿ ಹೇಳುತ್ತೇನೆ. ನಾನು ಇನ್ನೂ ಅವರಿವರ ಮುಖ ನೋಡಿಲ್ಲ‌. ಮುಖಗಳನ್ನು ನೋಡಿದರೆ ಆಗ ಅರ್ಥ ಆಗುತ್ತದೆ. ಆಗ ಎಲ್ಲವನ್ನು ಹೇಳುತ್ತೇನೆ ಎಂದಿದ್ದಾರೆ.

Exit mobile version