Site icon PowerTV

ಬಿಜೆಪಿಯ 40 ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್​

ದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣಾ ಕಣ ದಿನ ದಿನಕ್ಕೂ ರಂಗೇರುತ್ತಿದೆ. ಎಲ್ಲಾ ರಾಷ್ಟ್ರೀಯ ಪಕ್ಷಗಳಲ್ಲಿಯೂ ಪ್ರಚಾರದ ಭರಾಟೆ ಜೋರಾಗಿದೆ.ಇನ್ನೂ ಚುನವಣೆಯ ಪ್ರಚಾರಕೆಂದು ರಾಜ್ಯಕ್ಕೆ ಸ್ಟಾರ್​ ಪ್ರಚಾರಕರು ಆಗಮಿಸುತ್ತಿದ್ದಾರೆ.

ಹೌದು, ಮೇ 10ರಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಈ ಬಾರಿ ಚುನಾವಣೆಯಲ್ಲಿ ಜಯಶಾಲಿಯಾಗಲು ಎಲ್ಲಾ ಪಕ್ಷಗಳು ತಾ ಮುಂದು ನಾ ಮುಂದು ಅಂತ ಚುನವಣಾ ಪ್ರಚಾರದ ಕಣಕ್ಕೆ ಇಳಿಯುತ್ತಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಮತ್ತೊಂದು ಬಿಗ್​ ಶಾಕ್ : ಆಯನೂರು ಮಂಜುನಾಥ್ ರಾಜೀನಾಮೆ

ಬಿಜೆಪಿಯಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ಬಿಜೆಪಿಯಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಅನೇಕರು ಸ್ಟಾರ್ ಪ್ರಚಾರಕರಾಗಿ ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ.

ಇನ್ನೂ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಸ್ಟಾರ್ ಪ್ರಚಾರಕರಿಂದ ಬೃಹತ್ ಸಾರ್ವಜನಿಕ ರ್ಯಾಲಿಗಳು, ರೋಡ್ ಶೋಗಳು ಮತ್ತು ಸಮಾವೇಶಗಳನ್ನು ನಡೆಸಲು ಸಿದ್ಧತೆ ನಡೆಸಿದೆ.

 

 

Exit mobile version