Site icon PowerTV

ಯಡಿಯೂರಪ್ಪ ‘ರಟ್ಟೆ ಇನ್ನು ಗಟ್ಟೆ’ಯಿದೆ : ಬಿ.ವೈ ವಿಜಯೇಂದ್ರ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ರಟ್ಟೆ ಇನ್ನು ಗಟ್ಟಿಯಾಗಿದೆ. ಬಿಜೆಪಿ ಸರ್ಕಾರ ತರುವವರೆಗೂ ಬಿಡುವುದಿಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯಡಿಯೂರಪ್ಪ ಸಮ್ಮನೆ ಕೂರುವವರಲ್ಲ. ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಬರುತ್ತದೆ. ಯಡಿಯೂರಪ್ಪ ಹೆಜ್ಜೆ ಈಗ ಮುಂದೆ ಹಾಕಿದ್ದಾರೆ ಎಂದರೆ ಅದು ವಿರೋಧ ಪಕ್ಷದವರಿಗೆ ಗೊತ್ತಾಗಿದೆ ಎಂದು ಹೇಳಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಮೂಲೆಗುಂಪು ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಜಯೇಂದ್ರ, 81ನೇ ವರ್ಷದಲ್ಲೂ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯ ಹಿರಿಯರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಯಾರೋ ಒಬ್ಬರು ಕಾಂಗ್ರೆಸ್ ಸೇರಿದ್ದಾರೆ

ಚಾಮರಾಜನಗರ ಬಿಜೆಪಿಯಲ್ಲಿ ಲಿಂಗಾಯತರು ಮೂಲೆಗುಂಪು ಆಗುತ್ತಿದ್ದಾರೆಂಬ ಕಾಂಗ್ರೆಸ್ ಆರೋಪದ ಬಗ್ಗೆ ಮಾತನಾಡಿ, ವೀರಶೈವ ಲಿಂಗಾಯತರನ್ನು ಕಾಂಗ್ರೆಸ್ ಯಾವ ರೀತಿ ನಡೆಸಿಕೊಂಡಿದೆ ಅಂತ ಜನತೆಗೆ ಗೊತ್ತು. ಚುನಾವಣೆ ಸಂದರ್ಭದಲ್ಲಿ ಯಾರೋ ಒಬ್ಬರು ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದಾರೆ ಅಂತ ಬಿಜೆಪಿಯಿಂದ ಲಿಂಗಾಯತರಿಗೆ ಅನ್ಯಾಯ ಆಗಿದೆ ಅಂತ ಬಿಂಬಿಸಲು ಹೊರಟಿದ್ದಾರೆ. ಆದರೆ ಅದನ್ನು ಯಾರೂ ಒಪ್ಪಲ್ಲ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ : ಈಶ್ವರಪ್ಪಗೆ ಮೋದಿ ದೂರವಾಣಿ ಕರೆ : ಯಡಿಯೂರಪ್ಪ ಏನಂದ್ರು?

ಕಾಂಗ್ರೆಸ್ ಹೇಳಿಕೆ ಹಾಸ್ಯಾಸ್ಪದ

ಎಲ್ಲ ವರ್ಗದವರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಬಿಜೆಪಿ ಮುನ್ನುಗ್ಗುತ್ತಿದೆ. ಹಾಗಾಗಿಯೇ ಹಿಂದೆ 25 ಲೋಕಸಭಾ ಕ್ಷೇತ್ರ ಗೆದ್ದಿದ್ದೇವೆ. ಕಾಂಗ್ರೆಸ್ ನಾಯಕರ ಹೇಳಿಕೆಗಳು ಹಾಸ್ಯಾಸ್ಪದ ಎಂದು ಕಾಂಗ್ರೆಸ್ ನಾಯಕರ ಹೇಳಿಕೆಗೆ ವಿಜಯೇಂದ್ರ ಟಾಂಗ್ ಕೊಟ್ಟಿದ್ದಾರೆ.

ಕಾಂಗ್ರೆಸ್ 140 ಸೀಟ್ ಗೆಲ್ಲುವ ವಿಚಾರವಾಗಿ ಮಾತನಾಡಿ, ಮೇ 13ಕ್ಕೆ ಎಲ್ಲಾ ಗೊತ್ತಾಗುತ್ತೆ. 20 ದಿನಗಳಲ್ಲಿ ಚುನಾವಣೆ ಮುಗಿದಿರುತ್ತದೆ. ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ, ಹನೂರಲ್ಲೂ ಸಹ ನಮ್ಮ ಅಭ್ಯರ್ಥಿ ಗೆಲ್ತಾರೆ. ವರುಣಾದಲ್ಲಿ ದೇವರು ಮೆಚ್ಚುವ ರೀತಿಯಲ್ಲಿ, ಪ್ರಾಮಾಣಿಕವಾಗಿ ಕೆಲಸ ಮಾಡ್ತಿನಿ. ಪಕ್ಷ ನಿರ್ಧಾರ ಮಾಡಿದೆ ಸೋಮಣ್ಣ ವರುಣಾಗೆ ಬರಬೇಕು ಅಂತ. ಎಲ್ಲ ನಾಯಕರು ಶ್ರಮ ಹಾಕಿ ಸೋಮಣ್ಣ ಅವರನ್ನು ಗೆಲ್ಲಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Exit mobile version