Site icon PowerTV

ಕಾಂಗ್ರೆಸ್ ಲಿಂಗಾಯತ ಸಮಾಜವನ್ನು ಒಡೆಯುತ್ತಿದೆ : ಬಸವರಾಜ ಬೊಮ್ಮಾಯಿ

 ಬೆಂಗಳೂರು: ನಮ್ಮ ಸರ್ಕಾರ ಲಿಂಗಾಯತ ಸಮುದಾಯ ಸೇರಿ ಎಲ್ಲಾ ಸಮುದಾಯಕ್ಕೆ ನ್ಯಾಯ ಕೊಡುವಂತ ಕೆಲಸ ನಮ್ಮ ಸರ್ಕಾರ ಮಾಡಿದೆ. ಲಿಂಗಾಯತ ಸೇರಿದಂತೆ ಎಲ್ಲಾ ಸಮುದಾಯಗಳಿಗೂ ಮಾನ್ಯತೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಹೌದು,ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಸಮಾಜವನ್ನ ಒಡೆಯುವಂತ ಕೆಲಸ ಕಾಂಗ್ರೆಸ್ ಮಾಡಿದೆ. ಕಾಂಗ್ರೆಸ್ 50 ವರ್ಷದಿಂದ ಲಿಂಗಾಯತರನ್ನು ಸಿಎಂ ಮಾಡಿಲ್ಲ. ಕಾಂಗ್ರೆಸ್‌ನಲ್ಲಿ ಎಸ್ ನಿಜಲಿಂಗಪ್ಪ ಹೊರತುಪಡಿಸಿ ಲಿಂಗಾಯತ ಸಿಎಂ ಆಗಿಲ್ಲ. ವಿರೇಂದ್ರ ಪಾಟೀಲರನ್ನ ಎಷ್ಟು ಹೀನಾಯವಾಗಿ ನಡೆಸಿಕೊಂಡಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದರು.

ಇದನ್ನೂ ಓದಿ : ‘ಮಿಲ್ಟ್ರಿ ಹೋಟೆಲಿಂದಲೇ ಪ್ರಚಾರ’ ಆರಂಭ : ಡಿಕೆಶಿಗೆ ಬೊಮ್ಮಾಯಿ ಟಕ್ಕರ್

ಇನ್ನೂ ಕಾಂಗ್ರೆಸ್ ಕೇವಲ ಮೊಸಳೆ ಕಣ್ಣೀರು ಹಾಕುತ್ತದೆ. ಸಮಾಜವನ್ನ ಒಡೆಯುವಂತ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದ್ದು, ಯಾವ ಪಕ್ಷ ಯಾರಿಗೆ ನಾಯಕತ್ವ ಕೊಟ್ಟಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಸಮಾಜವನ್ನು ಒಡೆಯುವಂತ ಕೆಲಸ ಕಾಂಗ್ರೆಸ್ ಪಕ್ಷ ಮಾಡಿದೆ ಎಂದರು.

 

 

Exit mobile version