Site icon PowerTV

ಪ್ರಧಾನಿ ಮೋದಿ ಅವರೇ ಈ ಶ್ಲಾಘನೆ ಏಕೆ? : ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಜೊತೆ ದೂರವಾಣಿ ಕರೆಯಲ್ಲಿ ಮಾತನಾಡಿರುವ ಬಗ್ಗೆ ರಾಜ್ಯ ಕಾಂಗ್ರೆಸ್ ತೀವ್ರ ಆಕ್ರೋಶ ಹೊರಹಾಕಿದೆ.

ಈ ಕುರಿತು ಸರಣಿ ಟ್ವಿಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಭ್ರಷ್ಟಾಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೇ ಮಹಾಪೋಷಕರು. ರೌಡಿಗಳಿಗೆ ಕೈ ಮುಗಿಯುತ್ತಾರೆ. ಭ್ರಷ್ಟಾಚಾರಿಗಳಿಗೆ ಕರೆ ಮಾಡಿ ಪ್ರೋತ್ಸಾಹಿಸುತ್ತಾರೆ. ಆದರೆ, ಭ್ರಷ್ಟಾಚಾರದ ದೂರುಗಳ ಪತ್ರಗಳಿಗೆ ಮಾತ್ರ ಮೌನವಹಿಸುತ್ತಾರೆ. ನೆರೆ ಸಂತ್ರಸ್ತರ ಗೋಳುಗಳನ್ನು ನಿರ್ಲಕ್ಷಿಸುತ್ತಾರೆ. ಇಂತಹ ಅಪರೂಪದ ಪ್ರಧಾನಿ ನರೇಂದ್ರ ಮೋದಿ ಎಂದು ಕುಟುಕಿದೆ.

ದಮ್ಮು, ತಾಕತ್ತು ಇದ್ರೇ..!

ಪ್ರಧಾನಿ ಮೋದಿ ಅವರೇ, ನಿಮಗೆ ದಮ್ಮು, ತಾಕತ್ತು ಇದ್ದರೆ ಒಂದೇ ಒಂದು ಬಾರಿ ಗುತ್ತಿಗೆದಾರರ ಸಂಘದವರೊಂದಿಗೆ ಮಾತನಾಡಿ. ಒಂದೇ ಒಂದು ಬಾರಿ ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಪಾಟೀಲ್ ಕುಟುಂಬದೊಂದಿಗೆ ಮಾತನಾಡಿ. ಒಂದೇ ಒಂದು ಬಾರಿ ಪಿಎಸ್ಐ(PSI) ಹಗರಣದಿಂದ ಸಂತ್ರಸ್ತರಾದ ಅಭ್ಯರ್ಥಿಗಳೊಂದಿಗೆ ಮಾತನಾಡಿ. ಇದು ಸಾಧ್ಯವೇ? ಎಂದು ಪ್ರಶ್ನೆ ಮಾಡಿದೆ.

ಇದನ್ನೂ ಓದಿ : ಮೋದಿ ಮೇನಿಯಾಗೆ ಕೌಂಟ್ ಡೌನ್ : ಈ ಕ್ಷೇತ್ರದಿಂದಲೇ ಪ್ರಚಾರ ಶುರು

ಶ್ಲಾಘನೆ ಏಕೆ?

ಪ್ರಧಾನಿ ಮೋದಿ ಅವರು ಈಶ್ವರಪ್ಪನವರಿಗೆ ಕರೆ ಮಾಡಿ ಶ್ಲಾಘಿಸಿದ್ದಾರೆ. ಈ ಶ್ಲಾಘನೆ ಏಕೆ? 40% ಕಮಿಷನ್ ಲೂಟಿ ಮಾಡಿದ್ದಕ್ಕಾ? ಸಂತೋಷ್ ಪಾಟೀಲರ ಜೀವ ತೆಗೆದಿದ್ದಕ್ಕಾ?ಭ್ರಷ್ಟಾಚಾರದ ಪೋಷಣೆ ಮಾಡಿದ್ದಕ್ಕಾ? ಕಮಿಷನ್ ಬಗ್ಗೆ ಪತ್ರ ಬರೆದರೂ ಪ್ರತಿಕ್ರಿಯೆ ನೀಡದ ಮೋದಿ ಕಮಿಷನ್ ಲೂಟಿಕೋರನಿಗೆ ಬೆಂಬಲಿಸಿದ್ದಾರೆ ಎಂದು ಕಿಡಿಕಾರಿದೆ.

ಒಂದು ಕಡೆ ಈಶ್ವರಪ್ಪ ಮೇಲೆ ಕಮಿಷನ್ ಆರೋಪ. ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ. ಇನ್ನೊಂದೆಡೆ, ಸ್ವತಃ ಕರೆ ಮಾಡಿ ಈಶ್ವರಪ್ಪರನ್ನು ಶ್ಲಾಘಿಸಿದ ಪ್ರಧಾನಿ ಮೋದಿ. ಪ್ರಧಾನಿ ಮೋದಿ ‘ಭ್ರಷ್ಟಾಚಾರ’ದ ಪರ ನಿಂತಿದ್ದಾರೆ ಎನ್ನುವುದಕ್ಕೆ ಇದಕ್ಕಿಂದ ಸಾಕ್ಷಿ ಬೇಕೆ? ಎಂದು ಲೇವಡಿ ಮಾಡಿದೆ.

Exit mobile version