Site icon PowerTV

ಬಿಜೆಪಿಗೆ ಬಿಗ್ ಶಾಕ್ : ಕಮಲ ಬಿಟ್ಟು ‘ಕೈ’ ಹಿಡಿದ ಆನಂದಸಿಂಗ್ ಸಹೋದರಿ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ಈ ಟೈಮ್ ನಲ್ಲಿ ಬಿಜೆಪಿ ಬಿಗ್ ಶಾಕ್ ಎದುರಾಗಿದೆ. ಬಿಜೆಪಿ ಸಚಿವ ಆನಂದ್ ಸಿಂಗ್ ಸಹೋದರಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ.

ಹೊಸಕೋಟೆ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆ ರಾಜ್ಯ ಬಿಜೆಪಿ ಮಹಿಳಾ ಘಟಕದ ಉಪಾಧ್ಯಕ್ಷೆ, ಸಚಿವ ಆನಂದಸಿಂಗ್ ಸಹೋದರಿ ರಾಣಿ ಸಂಯುಕ್ತಾ ಸಿಂಗ್ ಬಿಜೆಪಿ ಪಕ್ಷಕ್ಕೆ ಗುಡ್​ ಬೈ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಇಂದು ರಾಣಿ ಸಂಯುಕ್ತಾ ಸಿಂಗ್ ಅವರು ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ.

ನಿನ್ನೆ (ಶುಕ್ರವಾರ) ರಾತ್ರಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಭೇಟಿಯಾಗಿದ್ದ ರಾಣಿ ಸಂಯುಕ್ತಾ ಸಿಂಗ್ ಹಲವು ವಿಷಯಗಳ ಬಗ್ಗೆ ಮಾತುಕತೆ ನಡೆಸಿದ್ದರು. ಈ ಮಾತುಕತೆ ಫಲಪ್ರಧವಾದ ಹಿನ್ನೆಲೆಯಲ್ಲಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.

ಇದನ್ನೂ ಓದಿ : ಡಿ.ಕೆ.ಶಿವಕುಮಾರ್​ ನಾಮಪತ್ರ ಅಂಗೀಕಾರ

ಆನಂದ್ ಸಿಂಗ್ ಗೆ ಸಂಕಷ್ಟ

ಸಚಿವ ಆನಂದ್ ಸಿಂಗ್ ಈ ಬಾರಿಯ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ, ತಮ್ಮ ಪುತ್ರ ಸಿದ್ದಾರ್ಥ ಸಿಂಗ್ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದೆ. ಈಗಾಗಲೇ ನಾಮಪತ್ರ ಸಲ್ಲಿಕೆ ಮಾಡಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಸಂದರ್ಭದಲ್ಲಿಯೇ ಸಹೋದರಿ ರಾಣಿ ಸಂಯುಕ್ತಾ ಸಿಂಗ್ ಕಾಂಗ್ರೆಸ್ ಸೇರಿರುವುದರಿಂದ ಮಗನ ಗೆಲುವಿಗೆ ಸಂಕಷ್ಟ ಎದುರಾಗಿದೆ. ರಾಣಿ ಸಂಯುಕ್ತಾ ಸಿಂಗ್ ಅವರು ತನ್ನ ಅಳಿಯ ಸಿದ್ಧಾರ್ಥ್ ಸಿಂಗ್ ವಿರುದ್ದ ಕಾಂಗ್ರೆಸ್ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಹೈಕಮಾಂಡ್​ಗೆ ಎಟಿಎಂ ಆಗಲು ಪಿತೂರಿ

ದೇಶದಲ್ಲಿ ಕಾಂಗ್ರೆಸ್​ ಪಕ್ಷ ದಿವಾಳಿಯಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದು ​ ಹೈಕಮಾಂಡ್​ಗೆ ಎಟಿಎಂ ಆಗಲು ಪಿತೂರಿ ನಡೆಸಿದೆ. ಕಾಂಗ್ರೆಸ್ ಪಿತೂರಿಗೆ ರಾಜ್ಯದ ಜನ ಅವಕಾಶ ನೀಡುವುದಿಲ್ಲ. ಪ್ರಜ್ಞಾವಂತ ಮತದಾರರು ಬಿಜೆಪಿಯನ್ನು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Exit mobile version