Sunday, August 24, 2025
Google search engine
HomeUncategorizedದೊಡ್ಡ ಘೋಷಣೆ : ಬಿಜೆಪಿ ಅಧಿಕಾರಕ್ಕೆ ಬಂದ್ರೆ 'ಈ ಸಮುದಾಯಕ್ಕೆ ಸಿಎಂ' ಸ್ಥಾನ

ದೊಡ್ಡ ಘೋಷಣೆ : ಬಿಜೆಪಿ ಅಧಿಕಾರಕ್ಕೆ ಬಂದ್ರೆ ‘ಈ ಸಮುದಾಯಕ್ಕೆ ಸಿಎಂ’ ಸ್ಥಾನ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ ದಿನಾಂಕ ಮಾತ್ರ ಘೋಷಣೆಯಾಗಿದೆ. ಮತದಾನ, ಫಲಿತಾಂಶಕ್ಕೂ ಮುನ್ನ ರಾಜಕೀಯ ಪಕ್ಷಗಳು ಸಿಎಂ ಸ್ಥಾನದ ಬಗ್ಗೆ ಕನಸು ಕಾಣುತ್ತಿದ್ದಾರೆ. ಈ ನಡುವೆ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಲಿಂಗಾಯತರೇ ಸಿಎಂ ಎಂಬ ಸುದ್ದಿ ಹಬ್ಬಿದೆ.

ಈ ಬಗ್ಗೆ ಬಿಜೆಪಿ ಅಭ್ಯರ್ಥಿ ಸಿ.ಸಿ ಪಾಟೀಲ್​ ಗದಗದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ರಾಜ್ಯದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಲಿಂಗಾಯತರೇ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ. 130 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಲಿಂಗಾಯತರೇ ಮತ್ತೆ ಸಿಎಂ ಆಗಲಿದ್ದಾರೆ ಹಾಗೂ ಆದರೆ, ಒಳ್ಳೆಯದು ಎಂದು ​ಅಭಿಪ್ರಾಯ ಪಟ್ಟಿದ್ದಾರೆ.

ಲಿಂಗಾಯತರನ್ನು ಸಿಎಂ ಮಾಡಲಿ

ಕಾಂಗ್ರೆಸ್​ನವರು ಧೈರ್ಯ, ತಾಕತ್ತು ಇದ್ದರೆ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡಲಿ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿದ್ದಾರೆ. ಅವರನ್ನು ಸ್ಟಾರ್ ಪ್ರಚಾರಕ್ಕರನ್ನಾಗಿ ಮಾಡಿದ್ದೇವೆ ಎಂದಿದ್ದಾರೆ. ಬಿಜೆಪಿಯಿಂದ ಬಂದ ನಾಯಕರಿಂದ ನಮಗೆ ಶಕ್ತಿ ಬಂದಿದೆ ಎನ್ನುತ್ತಾರೆ. ಹಾಗಾದರೆ ಕಾಂಗ್ರೆಸ್​ನವರು ಅಷ್ಟೊಂದು ಅಶಕ್ತರೇ ಎಂದು ಕಾಂಗ್ರೆಸ್ ನಾಯಕರಿಗೆ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ : ನನ್ನನ್ನು ‘ಚಚ್ಚಿ ಚಚ್ಚಿ ತಡೆಯುವ ಪ್ರಯತ್ನ’ ಮಾಡ್ತಿದ್ದಾರೆ : ಡಿ.ಕೆ ಶಿವಕುಮಾರ್

ಯಾರ ಹಣೆಯಲ್ಲಿ ಬರೆದಿದೆಯೋ?

ಒಂದೇ ಸಮುದಾಯದಿಂದ ಸರ್ಕಾರ ರಚನೆ ಮಾಡಲು ಆಗುವುದಿಲ್ಲ. ಲಿಂಗಾಯತರು, ಕುರುಬರು, ಒಕ್ಕಲಿಗರು ಸೇರಿದಂತೆ ಎಲ್ಲರೂ ಬೇಕು. ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಮೇ 18ರಂದು ಹೊಸ ಮುಖ್ಯಮಂತ್ರಿ ಆಯ್ಕೆಯಾಗಲಿದ್ದಾರೆ. ಯಾರ ಹಣೆಯಲ್ಲಿ ಬರೆದಿದೆಯೋ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ತಿಳಿಸಿದ್ದಾರೆ.

ಲಿಂಗಾಯತ ಡ್ಯಾಂ ನೀರು ಕಾಂಗ್ರೆಸ್​​ಗೆ ಬರುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಗೆ ಸಿ.ಸಿ ಪಾಟೀಲ್ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್​​ ಪಕ್ಷ ನಿಂತಿರುವ ನೆಲೆಯೇ ಕುಸಿಯುತ್ತಿದೆ. ಹೀಗಾಗಿ ಶಿವಕುಮಾರ್ ಲಿಂಗಾಯತ ಸಮುದಾಯದ ಬಗ್ಗೆ ಮಾತನಾಡುತ್ತಿದ್ದಾರೆ. ಡಿಕೆಶಿ ಇಷ್ಟು ಅನನುಭವಿ ಅಂದುಕೊಂಡಿರಲಿಲ್ಲ ಎಂದು ಕುಟುಕಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments