Monday, August 25, 2025
Google search engine
HomeUncategorized'ಮಾರ್ಗರೇಟ್​ ಲವರ್​ ಆಫ್​​ ರಾಮಾಚಾರಿ' ಜೋಡಿಗೆ ಡಾಲಿ ಧನಂಜಯ್ ಸಾಥ್

‘ಮಾರ್ಗರೇಟ್​ ಲವರ್​ ಆಫ್​​ ರಾಮಾಚಾರಿ’ ಜೋಡಿಗೆ ಡಾಲಿ ಧನಂಜಯ್ ಸಾಥ್

ಬೆಂಗಳೂರು : ಸ್ಯಾಂಡಲ್‌ವುಡ್‌ಗೀಗ ಮತ್ತೊಂದು ರಾಮಾಚಾರಿ- ಮಾರ್ಗರೇಟ್‌ ಜೋಡಿ ಆಗಮಿಸುತ್ತಿದೆ. ‘ಮಾರ್ಗರೇಟ್​ ಲವರ್​ ಆಫ್​​ ರಾಮಾಚಾರಿ’ ಸಿನಿಮಾ ಸೆಟ್ಟೇರಿದ್ದು, ಡಾಲಿ ಧನಂಜಯ್‌ ಹೊಸ ತಂಡಕ್ಕೆ ಶುಭ ಹಾರೈಸಿದ್ದಾರೆ.

ಹೌದು ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಸಿನಿಮಾ ನಾಗರಹಾವು. ಈ ಚಿತ್ರದ ರಾಮಾಚಾರಿ ಹಾಗೂ ಮಾರ್ಗರೇಟ್​ ಪಾತ್ರಗಳು ಇಂದಿಗೂ ಪ್ರೇಕ್ಷಕರ ಅಚ್ಚುಮೆಚ್ಚು. ಇದೇ ಚಿತ್ರದ ಪಾತ್ರಗಳನ್ನು ಇಟ್ಕೊಂಡು ಬಂದ ರಾಮಾಚಾರಿ ಮತ್ತು ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ಇದೇ ನಾಗರಹಾವು ಸಿನಿಮಾದ ಪಾತ್ರಗಳ ಸ್ಫೂರ್ತಿ ಪಡೆದು ಹೊಸ ಸಿನಿಮಾವೊಂದು ಬರ್ತಿದೆ. ಆ ಚಿತ್ರಕ್ಕೆ ಮಾರ್ಗರೇಟ್ ಲವರ್ ಆಫ್ ರಾಮಾಚಾರಿ ಎಂದು ಟೈಟಲ್ ಇಡಲಾಗಿದೆ.

ಯುವ ಪ್ರತಿಭೆ ಅಭಿಲಾಶ್ ನಾಯಕನಾಗಿ ಹಾಗೂ ಸೋನಲ್ ಮೊಂಥೆರೋ ನಾಯಕಿಯಾಗಿ ನಟಿಸುತ್ತಿರುವ ಮಾರ್ಗರೇಟ್ ಲವರ್ ಆಫ್ ರಾಮಾಚಾರಿ ಚಿತ್ರದ ಮುಹೂರ್ತ ಸಮಾರಂಭವಿಂದು ಬೆಂಗಳೂರಿನ ಬಂಡೇ ಮಹಾಕಾಳಿ‌ ಸನ್ನಿಧಿಯಲ್ಲಿ ನೆರವೇರಿತು. ನಟರಾಕ್ಷಸ ಡಾಲಿ ಧನಂಜಯ್ ಹೊಸ‌ ತಂಡಕ್ಕೆ ಶುಭ ಹಾರೈಸಿದರು.

ಡಾಲಿ ಧನಂಜಯ್ ಮಾತನಾಡಿ,ಅಭಿ ಬಡವ ರಾಸ್ಕಲ್, ಹೊಯ್ಸಳದಲ್ಲಿ ಸಣ್ಣ ಪಾತ್ರ ಮಾಡಿದ್ದಾನೆ. ಆತ ಅಭಿಮಾನಿಯಾಗಿ ಪರಿಚಯ. ಈಗ ಹೀರೋ ಆಗುತ್ತಿದ್ದಾನೆ. ಸುಮಾರು ವರ್ಷಗಳ ಪ್ರಯತ್ನ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದು ತಿಳಿಸಿದರು.

‌ನಿರ್ದೇಶಕ ಗಿರಿಧರ್ ಕುಂಬಾರ್ ಮಾತನಾಡಿ, ಈ ಚಿತ್ರದ ಮೂಲಕ ಇವತ್ತಿನ ಸಮಾಜಕ್ಕೆ ಬೇಕಿರುವ ಸಂದೇಶ ಕೊಡುತ್ತೇವೆ. ನಾಗರಹಾವು ಸಿನಿಮಾದ ಪಾತ್ರಗಳು ಲೆಜೆಂಡ್ ಪಾತ್ರಗಳು. ಅವುಗಳನ್ನು ನಾವು ಮುಟ್ಟಲಾಗುವುದಿಲ್ಲ. ಒಬ್ಬ ಸಾಮಾನ್ಯ ಹುಡುಗನಿಗೆ ಶ್ರೀಮಂತ ಹುಡುಗಿ ಸಿಕ್ಕಾಗ ಏನಾಗುತ್ತದೆ ಅನ್ನೋದೆ ಕಥೆ. ಮೇ 15ರಂದು ಶೂಟಿಂಗ್ ಶುರುವಾಗಲಿದೆ ಎಂದರು.

ನಿರ್ಮಾಪಕರಾದ ಹರೀಶ್ ಮಾತಾನಾಡಿ, ಬಹಳ ಸಂತೋಷ ಆಗಿದೆ. ಧನಂಜಯ್ ಅಣ್ಣ ಬಂದಿರುವುದು ಖುಷಿಕೊಟ್ಟಿದೆ. ಅವರು ಯುವಕರಿಗೆ ಎಷ್ಟು ಪ್ರೇರಣೆ ಕೊಡುತ್ತಾರೆ ಎಂದರೆ ನಿಜ ಬೆಲೆ ಕಟ್ಟಲು ಆಗುವುದಿಲ್ಲ. ಎಲ್ಲವೂ ಹೊಸಮುಖ. ಧನಂಜಯ್ ಅಣ್ಣ, ಸುರೇಶ್ ಅಣ್ಣ, ಅಜಯ್ ಅಣ್ಣ ಮಾರ್ಗದರ್ಶನದಲ್ಲಿ ಹೋಗುತ್ತೇವೆ. ಒಳ್ಳೆ ಯುವಕರಿದ್ದಾರೆ. ಅವರ ಭವಿಷ್ಯ ಈ ಚಿತ್ರದಲ್ಲಿದೆ. ಈ ಸಿನಿಮಾ ಮೇಲೆ ನಿಮ್ಮ ಆಶೀರ್ವಾದ ಇರಲಿ ಎಂದರು.

ನಟ ಅಭಿಲಾಷ್, ತುಂಬಾ ಎಮೋಷನಲ್ ಮೂಮೆಂಟ್. ಇವತ್ತು ಕಷ್ಟಪಟ್ಟು ಇಲ್ಲಿ ಕೂತಿದ್ದೇನೆ. ಇದಕ್ಕೆ ಮೂಲ ಕಾರಣ ನಿರ್ಮಾಪಕರು. ನನ್ನ ಒದ್ದಾಟಗಳನ್ನು ಬಹಳ ಹತ್ತಿರದಿದ್ದ ನೋಡಿದ್ದಾರೆ. ಇವರೇ ನನ್ನ ಅನ್ನದಾತರು. ಧನಂಜಯ್ ಅಣ್ಣ ಹೇಳಿಕೊಟ್ಟ ಮಾರ್ಗದರ್ಶನಲ್ಲಿ ನಾನು ನಡೆಯುತ್ತಿದ್ದೇವೆ. ಈಗ ಅವರು ನನ್ನ ಚಿತ್ರಕ್ಕೆ ಹಾರೈಸಿರುವುದು ಖುಷಿಕೊಟ್ಟಿದೆ ಎಂದರು.

ರಂಗಭೂಮಿ ಹಿನ್ನೆಲೆ ಹೊಂದಿರುವ ನಟ ಅಭಿಲಾಶ್​ ‘ಮಾರ್ಗರೇಟ್​ ಲವರ್​ ಆಫ್​​ ರಾಮಾಚಾರಿ’ ಸಿನಿಮಾ ಮೂಲಕ ಹೀರೋ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ‘ಕೆಜಿಎಫ್​’, ‘ಲವ್​ ಮಾಕ್ಟೇಲ್​’, ‘ಬಡವ ರಾಸ್ಕಲ್​’, ‘ಗುರುದೇವ್​ ಹೊಯ್ಸಳ’ ಮುಂತಾದ ಸಿನಿಮಾಗಳಲ್ಲಿ ಅಭಿಲಾಶ್​ ಗುರುತಿಸಿಕೊಂಡಿದ್ದಾರೆ. ನಾಗರಹಾವು ಸಿನಿಮಾದಲ್ಲಿ ಪಾತ್ರಗಳನ್ನು ಹೋಲುವ ರೀತಿಯ ಹೆಸರುಗಳನ್ನೇ ‘ಮಾರ್ಗರೇಟ್​ ಲವರ್​ ಆಫ್​ ರಾಮಾಚಾರಿ’ ಸಿನಿಮಾದಲ್ಲಿಯೂ ಇಡಲಾಗಿದೆ.

ಅಭಿಲಾಶ್​ ​ರಾಮಾಚಾರಿ ಅಲಿಯಾಸ್​ ರಾಮು ಎಂಬ ಪಾತ್ರ ಮಾಡಲಿದ್ದಾರೆ. ನಟಿ ಸೋನಲ್​ ಮೊಂಥೆರೋ ಮೀರಾ ರಾಘವ್​ ರಾಮ್​ ಅಲಿಯಾಸ್​ ಮ್ಯಾಗಿ ಎಂಬ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಯಶ್​ ಶೆಟ್ಟಿ ಜಯಂತ್​ ಅಲಿಯಾಸ್​ ಜಲೀಲಾಗಿ ಕಾಣಿಸಿಕೊಳ್ಳಲಿದ್ದಾರೆ. ಅನುಭವಿ ನಟರಾದ ಅವಿನಾಶ್​ ಮತ್ತು ರವಿಶಂಕರ್​ ಮುಂತಾದವರು ಕೂಡ ನಟಿಸುತ್ತಿದ್ದಾರೆ.

ವನಿತಾ ಎಚ್​​.ಎನ್​. ಅವರ ‘ನಿಹಾಂತ್​ ಪ್ರೊಡಕ್ಷನ್ಸ್​’ ಮೂಲಕ ‘ಮಾರ್ಗರೇಟ್​ ಲವರ್​ ಆಫ್​ ರಾಮಾಚಾರಿ’ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ. ಈ ಚಿತ್ರಕ್ಕೆ ವಾಸುಕಿ ವೈಭವ್​ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಮಾರ್ಗರೇಟ್​ ಲವರ್​ ಆಫ್​​ ರಾಮಾಚಾರಿ’ ಮುಹೂರ್ತ ನೆರವೇರಿದ್ದು, ಮೇ 15ರಿಂದು ಚಿತ್ರದುರ್ಗದಲ್ಲಿ ಶೂಟಿಂಗ್ ಶುರುವಾಗಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments