Site icon PowerTV

Rain Updates: ಆರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಹಲವು ಕಡೆ ವರುಣ ಅವಾಂತರ ಸೃಷ್ಟಿಸಿದ್ದಾನೆ. ಮುಂದಿನ ಆರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಹೌದು ಇನ್ನೂ ಬೇಸಿಗೆಕಾಲ ಇರುವಾಗಲ್ಲೇ  ರಾಜ್ಯದಲ್ಲಿದಲ್ಲಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ವರದಿಯಂತೆ ಮುಂದಿನ ದಿನಗಳಲ್ಲಿ ಅತಿ ಹೆಚ್ಚು, ಮಳೆಯಾಗುವ ಸಾಧ್ಯತೆ ಇರುತ್ತದೆ.

ಎಲ್ಲೆಲ್ಲೆ ಮಳೆ..? 

ಶಿವಮೊಗ್ಗ,ಚಿಕ್ಕಮಗಳೂರು,ಹಾಗೂ ಗ್ರಾಮಾಂತರ, ಚಾಮರಾಜನಗರ,ಚಿಕ್ಕಬಳ್ಳಾಪುರ,ಚಿಕ್ಕಬಳ್ಳಾಪುರ,ಚಿತ್ರದುರ್ಗ,ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನೂ ಕೋಲಾರ,ಮಂಡ್ಯ,ಮೈಸೂರು,ರಾಮನಗರ,ತುಮಕೂರು,ಬಳ್ಳಾರಿ,ವಿಜಯನಗರ,ಬಾಗಲಕೋಟೆ,ಬೆಳಗಾವಿ, ಬೀದರ್​ನಲ್ಲಿ ಮಳೆಯಾಗಲಿದೆ ಎಂದು ತಿಳಿದು ಬಂದಿದೆ.

ಇಂದಿನಿಂದ ಏಪ್ರಿಲ್​ 29ರವರೆಗೆ ಮಳೆಯಾಗುವ ಸಾಧ್ಯತೆ

ಕರ್ನಾಟಕದಲ್ಲಿ ವರುಣನ ಆರ್ಭಟ ಶುರುವಾಗಲಿದ್ದು, ಏಪ್ರಿಲ್​ 29ರವರೆಗೆ ಮಳೆಯಾಗುವ ಸಾಧ್ಯತೆ ಇದೆ.

Exit mobile version