Site icon PowerTV

Muslim Reservation: ಮುಸ್ಲಿಮರ 2ಬಿ ಮೀಸಲಾತಿ ರದ್ದು ; ರಾಜ್ಯ ಸರ್ಕಾರದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಮುಸ್ಲಿಂ ಮೀಸಲಾತಿ 2ಬಿಯನ್ನು (Muslim 2B Reservation) ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ (Karnataka Government) ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ಹೌದು, ಮುಸ್ಲಿಂ ಸಮುದಾಯದ 2ಬಿ ಮೀಸಲಾತಿ ರದ್ದುಪಡಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮೇ 9ಕ್ಕೆ ಮುಂದೂಡಿದೆ.

ಇಂದು ಪ್ರಕರಣ ವಿಚಾರಣೆ ಆರಂಭಕ್ಕೂ ಮುನ್ನ ಅರ್ಜಿ ಬಗ್ಗೆ ಪ್ರಸ್ತಾಪಿಸಿದ ತುಷಾರ್ ಮೆಹ್ತಾ, ರಾಜ್ಯ ಸರ್ಕಾರಕ್ಕೆ ಹೆಚ್ಚುವರಿ ಮಾಹಿತಿಯುಳ್ಳ ಅಫಿಡವಿಟ್ ಸಲ್ಲಿಸಲು ಸಾಧ್ಯವಾಗಿಲ್ಲ. ಹೀಗಾಗಿ ಇನ್ನೊಂದು ವಾರ ಸಮಯ ಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿವಾದಿಯಾಗಿದ್ದ ಕಪಿಲ್ ಸಿಬಲ್‌ ಕೂಡಾ ಒಪ್ಪಿಗೆ ಸೂಚಿಸಿದ ಹಿನ್ನಲೆ ವಿಚಾರಣೆಯನ್ನು ಮುಂದೂಡಲಾಯಿತು.

Exit mobile version