Site icon PowerTV

ಮತದಾನ ಪ್ರಮಾಣ ಹೆಚ್ಚಿಸಲು ಸ್ವೀಪ್ ಎಕ್ಸ್ ಪ್ರೆಸ್ ಬಸ್ ಸಂಚಾರ

ಶಿವಮೊಗ್ಗ: ಯುವಸಮೂದಯ ಮತಗಟ್ಟೆಗೆ ಆಗಮಿಸಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಲು ಸ್ವೀಪ್ ಎಕ್ಸ್ ಪ್ರೆಸ್ ಬಸ್ ಸಂಚಾರ ಆರಂಭಿಸಿದೆ. ಮತದಾನದ ಪ್ರಮಾಣ ರಾಜ್ಯದಲ್ಲಿ ಕೆಡಿಮೆ ಪ್ರಮಾಣದಲ್ಲಿ ಇದೆ. ಇದನ್ನು ಹೆಚ್ಚಿಸುವ ಉದ್ದೇಶದಿಂದ ಸ್ವೀಪ್ ಎಕ್ಸ್ ಪ್ರೆಸ್ ಬಸ್ ಅಭಿಯಾನವನ್ನು ಜಿಲ್ಲಾದ್ಯಂತ ಚುನಾವಣಾ ಅಧಿಕಾರಿಗಳು ಹಮ್ಮಿಕೊಂಡಿದ್ದಾರೆ.

ಹೌದು, ಜನರಲ್ಲಿ ಇವಿಎಂ/ವಿವಿಪ್ಯಾಟ್ ಸೇರಿದಂತೆ ಮತದಾನ ಪ್ರಕ್ರಿಯೆ ಕುರಿತು ಜಾಗೃತಿ ಮೂಡಿಸುವುದು ಹಾಗೂ ಮತದಾನ ಪ್ರಮಾಣ ಹೆಚ್ಚಿಸುವುದು ಈ ಸ್ವೀಪ್ ಎಕ್ಸ್ ಪ್ರೆಸ್ ಬಸ್ ಸಂಚಾರದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿ. ಪಂ. ಮತ್ತು ಶಿವಮೊಗ್ಗ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮದಡಿಯಲ್ಲಿ ಇಂದು ಜಿಲ್ಲಾ ಪಂಚಾಯತ್ ಆವರಣದಲ್ಲಿ ಸ್ವೀಪ್ ಎಕ್ಸ್ ಪ್ರೆಸ್ ಬಸ್ ಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದ್ದಾರೆ.

ಇನ್ನೂ ಗ್ರಾಮೀಣ ಭಾಗದಲ್ಲಿ ಈ ಹಿಂದೆ ಉತ್ತಮವಾಗಿ ಮತದಾನ ಆಗಿದೆ. ಆದರೆ ನಗರ ಪ್ರದೇಶದಲ್ಲಿ ಕಡಿಮೆ ಮತದಾನ ಆಗಿದ್ದು, ಮತದಾನ ಪ್ರಮಾಣ ಹೆಚ್ಚಿಸಲು ಸ್ವೀಪ್ ವತಿಯಿಂದ ಅನೇಕ ಉತ್ತಮ ಕಾರ್ಯ ಚಟುವಟಿಕೆಗಳು ನಡೆಯುತ್ತಿವೆ. ಕಳೆದ ಬಾರಿಗಿಂತ ಶೇ.10 ರಷ್ಟಾದರೂ ಮತದಾನ ಪ್ರಮಾಣ ಹೆಚ್ಚಬೇಕು. ಈ ಎಕ್ಸ್ ಪ್ರೆಸ್ ಬಸ್ ಜಿಲ್ಲಾದ್ಯಂತ ಕಡಿಮೆ ಮತದಾನ ಆದ ಸ್ಥಳಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಲಿದೆ. ಮೇ 9 ರವರೆಗೆ ಸಂಚರಿಸಿ ಮತದಾನ ಕುರಿತು ಜಾಗೃತಿ ಮೂಡಿಸಲಿದೆ ಎಂದಿದ್ದಾರೆ.

Exit mobile version