Site icon PowerTV

ಶೋಭಾ ಕರಂದ್ಲಾಜೆಯನ್ನು ವಿಚಾರಣೆ ಮಾಡಿ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಅಥವಾ ಬಿಜೆಪಿ ಪಕ್ಷವೋ? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಪ್ರಶ್ನೆ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಪಕ್ಷದ ಪದಾಧಿಕಾರಿಗಳು ನಿರ್ಧರಿಸಲಿರುವುದು ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನೋ? ಬಿಜೆಪಿ ಪರ ಮತ್ತು ವಿರೋಧಿ ಮತದಾರರು ಇರುವ ಮತಗಟ್ಟೆಗಳನ್ನೋ? ಎಂದು ವಾಗ್ದಾಳಿ ನಡೆಸಿದ್ದಾರೆ.

ತಮ್ಮ ಪಕ್ಷದ ಪರವಾಗಿಲ್ಲದ ಮತದಾರರು ಇರುವ ಮತಗಟ್ಟೆಗಳಲ್ಲಿ‌ ಭದ್ರತೆಯ ನೆಪದಲ್ಲಿ ಕೇಂದ್ರ ಸೇನಾಪಡೆಗಳನ್ನು ನಿಯೋಜಿಸಿ ಮತದಾರರನ್ನು ಬೆದರಿಸಿ ಅವರು ಮತದಾನ ಮಾಡದಂತೆ ತಡೆಯುವುದು ಈ ಪತ್ರದ ದುರುದ್ದೇಶವಾಗಿದೆ ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

ಇದನ್ನೂ ಓದಿ : ನಾನ್ಯಾಕೆ ಸುಮಲತಾ ಬಗ್ಗೆ ಟೀಕೆ ಮಾಡಲಿ : ಎಚ್.ಡಿ ಕುಮಾರಸ್ವಾಮಿ

ಚುನಾವಣಾ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮತ್ತು ವಿಡಿಯೋ ರೆಕಾರ್ಡಿಂಗ್ ಮಾಡುವ ಹೊಣೆ ಚುನಾವಣಾ ಆಯೋಗದಲ್ಲವೇ? ಇದನ್ನು ನಡೆಸಲು ರಾಜಕೀಯ ಪಕ್ಷಕ್ಕೆ ಅನುಮತಿ ಕೊಟ್ಟವರು ಯಾರು? ಎಂದು ಪ್ರಶ್ನಿಸಿದ್ದಾರೆ.

ಶೋಭಾ ಕರಂದ್ಲಾಜೆಯನ್ನ ವಿಚಾರಣೆ ಮಾಡಿ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಈ ಪತ್ರ ಬರೆದಿರುವುದನ್ನು ನೋಡಿದರೆ ಕೇಂದ್ರ ಸರ್ಕಾರವೇ ಈ ಅಕ್ರಮ ಚಟುವಟಿಕೆಯಲ್ಲಿ ಷಾಮೀಲಾಗುರುವುದು ಸ್ಪಷ್ಟವಾಗಿದೆ. ಕೇಂದ್ರ ಚುನಾವಣಾ ಆಯುಕ್ತರು ತಕ್ಷಣ ಮಧ್ಯೆಪ್ರವೇಶಿಸಿ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ವಿಚಾರಣೆಗೊಳಪಡಿಸಿ ಅವರು ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ನಿಷೇಧಿಸಬೇಕು. ಅವರು ಪಕ್ಷದ ನಾಯಕರು ಮತ್ತು ಅಭ್ಯರ್ಥಿಗಳಿಂದ ಪಡೆದಿರುವ ಮಾಹಿತಿಯನ್ನು ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

Exit mobile version