Tuesday, August 26, 2025
Google search engine
HomeUncategorizedಅಭಿವೃದ್ಧಿ ಕಾರ್ಯಗಳೇ ನನ್ನ ಗೆಲುವಿಗೆ ಸಹಕಾರಿ : ಸಚಿವ ಗೋಪಾಲಯ್ಯ

ಅಭಿವೃದ್ಧಿ ಕಾರ್ಯಗಳೇ ನನ್ನ ಗೆಲುವಿಗೆ ಸಹಕಾರಿ : ಸಚಿವ ಗೋಪಾಲಯ್ಯ

ಬೆಂಗಳೂರು : ಅಬಕಾರಿ ಸಚಿವ ಹಾಗೂ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಗೋಪಾಲಯ್ಯ ಅವರು ಗಣೇಶ ಬ್ಲಾಕ್ ನಲ್ಲಿ ಇಂದು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಪ್ರಚಾರದ ವೇಳೆ ಮಾತನಾಡಿದ ಅವರು ಕ್ಷೇತ್ರದದಲ್ಲಿ ಬಿಜೆಪಿಗೆ ಹಾಗೂ ಗೋಪಾಲಯ್ಯನವರಿಗೆ ಮತವನ್ನು ಚಲಾಯಿಸುತ್ತೇವೆ ಎಂದು ಜನಸಾಮಾನ್ಯರು ನಗು ಮುಖದಿಂದ ನನ್ನನು ಸ್ವಾಗತಿಸುತ್ತಿದ್ದಾರೆ. ಈವರೆಗೆ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳು ನನ್ನ ಗೆಲುವಿಗೆ ಸಹಕಾರಿಯಾಗಲಿದೆ ಎಂದರು.

ಬಡವರು, ಮಧ್ಯಮ ವರ್ಗದವರು, ಹಿಂದುಳಿದವರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲರಿಗೂ ಬೇಕಾದಂತ ಸೌಲಭ್ಯಗಳನ್ನು ಕಲ್ಪಿಸಿ ಕ್ಷೇತ್ರದಲ್ಲಿ ನಿರಂತರವಾಗಿ ಸೇವೆ ಸಲ್ಲಿಸಿದ್ದೇನೆ. ಇದರ ಫಲವಾಗಿ ಕ್ಷೇತ್ರದ ಜನರು ಬಿಜೆಪಿಗೆ ಹೆಚ್ಚಿನ ಮತವನ್ನು ನೀಡುತ್ತಾರೆ ಎಂದು ತಿಳಿಸಿದರು.

ಕೋವಿಡ್ ಸಮಯದಲ್ಲಿ ಕ್ಷೇತ್ರದ ಜನರ ಸಂಕಷ್ಟವನ್ನು ಅರಿತು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಮನೆ ಮನೆಗೆ ಆಹಾರ ಕಿಟ್, ಆರೋಗ್ಯ ಕಿಟ್, ಆಕ್ಸಿಜನ್ ವ್ಯವಸ್ಥೆ, ಲಸಿಕೆ, ಮಾತ್ರೆಗಳು ಹೀಗೆ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಸಚಿವ ಕೆ.ಗೋಪಾಲಯ್ಯ ಹೇಳಿದರು.

ಇದನ್ನೂ ಓದಿ : ಡಿಕೆಶಿ ನೋಡಿದ್ರೆ ಯಾರು ವೋಟ್ ಹಾಕುತ್ತಾರೆ : ಅಶ್ವತ್ಥನಾರಾಯಣ

ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ

ಇದರ ಜೊತೆಗೆ ಕ್ಷೇತ್ರದಲ್ಲಿ ಆಸ್ಪತ್ರೆಗಳು, ಹೆರಿಗೆ ಆಸ್ಪತ್ರೆ, ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣ, ರಾಣಿ ಅಬ್ಬಕ್ಕ ದೇವಿ ಕ್ರೀಡಾಂಗಣ, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಪಾರ್ಕ್, ಶ್ರೀ ಶಿವಕುಮಾರ ಸ್ವಾಮೀಜಿ ಪಾರ್ಕ್, ನವ ನಂದಿನಿ ಪಾರ್ಕ್ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳು ಶಾಸಕನಾಗಿ ಮತ್ತು ಸಚಿವನಾಗಿ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ ಎಂದು ತಿಳಿಸಿದರು.

ಕಾಮಾಕ್ಷಿಪಾಳ್ಯದಲ್ಲಿ ಸವಿತಾ ಸಮಾಜದ ಮುಖಂಡರೊಂದಿಗೆ ಸಚಿವ ಕೆ.ಗೋಪಾಲಯ್ಯ ಅವರು ಸಮಾಲೋಚನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕ ನೆಲ ನರೇಂದ್ರ ಬಾಬು, ಮಾಜಿ ಉಪಮೇಯರ್ ಎಸ್.ಹರೀಶ್, ಬಿಬಿಎಂಪಿ ಮಾಜಿ ಸದಸ್ಯ ರಾಜೇಂದ್ರ ಕುಮಾರ್, ಡಾಕ್ಟರ್ ಗಿರೀಶ್ ನಾಶಿ, ರೈಲ್ವೆ ನಾರಾಯಣ್, ಅನಂತ್, ಚಂದ್ರದಾಸ್, ವಾರ್ಡ್ ಅಧ್ಯಕ್ಷ ನಾರಾಯಣ್, ಯಶೋದಮ್ಮ, ವಿಜಿ ಕುಮಾರ್ ಸೇರಿದಂತೆ ಬಿಜೆಪಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments