Tuesday, August 26, 2025
Google search engine
HomeUncategorizedಪ್ರಧಾನಿ ಮೋದಿ ವಿಶ್ವಗುರು, ಅದಕ್ಕೆ 'ಕಾಂಗ್ರೆಸ್ ಗೆ ಭಯ' : ಸಚಿವ ಡಾ.ಕೆ ಸುಧಾಕರ್

ಪ್ರಧಾನಿ ಮೋದಿ ವಿಶ್ವಗುರು, ಅದಕ್ಕೆ ‘ಕಾಂಗ್ರೆಸ್ ಗೆ ಭಯ’ : ಸಚಿವ ಡಾ.ಕೆ ಸುಧಾಕರ್

ಬೆಂಗಳೂರು : ದೇಶದ ಬಹುದೊಡ್ಡ ಹಿಂದುಳಿದ ನಾಯಕ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ಇಂದು ಮೋದಿಯವರು ವಿಶ್ವಗುರುವಾಗಿದ್ದಾರೆ ಎಂದು ಸಚಿವ ಹಾಗೂ ಚಿಕ್ಕಬಳ್ಳಾಫುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಂಚೇನಹಳ್ಳಿ ತಾಲ್ಲೂಕಿನ ಜರಬಂಡಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಇಂದು ಚುನಾವಣಾ ಪ್ರಚಾರ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್​ನವರು ಯಾವಾಗಲೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಯಾಳುಸುತ್ತಿದ್ದಾರೆ. ಮೋದಿಯವರನ್ನು ಕಂಡರೆ ಕಾಂಗ್ರೆಸ್ ನಾಯಕರಿಗೆ ಭಯ. ಕಾಂಗ್ರೆಸ್ ನವರಿಗೆ ಸೋಲಿನ ಭೀತಿ ಎದುರಾಗಿದೆ. ಇದೇ ಕಾರಣದಿಂದ ಅವ್ರು ಪ್ರಧಾನಿ ಮೋದಿಯನ್ನು ಟೀಕೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ : ಕಾಂಗ್ರೆಸ್ ಗೆ ‘ಬಸವಣ್ಣನವರ ಆದರ್ಶಗಳು’ ಅರ್ಥವಾಗಿಲ್ಲ : ಪ್ರಧಾನಿ ಮೋದಿ

ಕೈನಿಂದ ಬಲಿಜ ಸಮುದಾಯಕ್ಕೆ ವಂಚನೆ

ಕಾಂಗ್ರೆಸ್ ಸರ್ಕಾರ ಬಲಿಜ ಸಮುದಾಯವನ್ನು ಪ್ರವರ್ಗ 2ಎ ಮೀಸಲಾತಿಯಿಂದ ತೆಗೆದು ಹಾಕಿ ವಂಚಿಸಿದೆ. ಬಿಜೆಪಿ ಸರ್ಕಾರ ಬಲಿಜ ಸಮುದಾಯಕ್ಕೆ ಶೈಕ್ಷಣಿಕ ಕ್ಷೇತ್ರದಲ್ಲಿ 2ಎ ಪ್ರವರ್ಗದ ಮೀಸಲಾತಿಯನ್ನು ಕಲ್ಪಿಸುವ ಮೂಲಕ ನ್ಯಾಯ ಒದಗಿಸಿದೆ ಎಂದು ಸಚಿವ ಡಾ.ಕೆ ಸುಧಾಕರ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಅಭಿವೃದ್ಧಿಯ ಪರ್ವವನ್ನು ಆರಂಭ

ಮಂಚೇನಹಳ್ಳಿ ತಾಲ್ಲೂಕು ರಚನೆ, ಮಿನಿ ವಿಧಾನಸೌಧ ಮಂಜೂರು, ತಾಲ್ಲೂಕು ಕಛೇರಿ ಕಾರ್ಯಾರಂಭ, ತಾಲ್ಲೂಕು ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳಿಗೆ ಶಂಕುಸ್ಥಾಪನೆ, ತಾಲ್ಲೂಕಿನ 63 ಗ್ರಾಮಗಳಿಗೆ ಕುಡಿಯುವ ನೀರಿನ ಸೌಲಭ್ಯ ಹೀಗೆ ಮಂಚೇನಹಳ್ಳಿ ತಾಲ್ಲೂಕಿನ ಅಭಿವೃದ್ಧಿಗೆ ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಒತ್ತಾಸೆಯಾಗಿ ನಿಂತಿದೆ ಎಂದು ಹೇಳಿದರು.

ಹಲವು ಯೋಜನೆಗಳ ಮೂಲಕ ಚಿಕ್ಕಬಳ್ಳಾಪುರದಲ್ಲಿ ಅಭಿವೃದ್ಧಿಯ ಪರ್ವವನ್ನು ಆರಂಭಿಸಲಾಗಿದ್ದು, ಕ್ಷೇತ್ರದ ಜನತೆ ಮತ್ತೊಮ್ಮೆ ನನಗೆ ಆಶೀರ್ವದಿಸುವ ವಿಶ್ವಾಸವಿದೆ ಎಂದು ಸಚಿವ ಡಾ.ಕೆ ಸುಧಾಕರ್ ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments