Site icon PowerTV

ಮೋದಿ ಸಿದ್ಧ ಇದ್ರೆ ‘ಓಟದ ಸ್ಪರ್ಧೆಗೆ ನಾನು ಸಿದ್ಧ’ : ಪ್ರಧಾನಿ ಮೋದಿಗೆ ‘ಸಿದ್ದು ಗುದ್ದು’

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಸಿದ್ಧ ಇದ್ದರೆ ಅವರ ಜೊತೆಯಲ್ಲಿ ಓಟದ ಸ್ಪರ್ಧೆಗೆ ನಾನು ಸಿದ್ಧ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟಕ್ಕರ್ ಕೊಟ್ಟಿದ್ದಾರೆ.

ಇದು ನನ್ನ ಕೊನೆಯ ಚುನಾವಣೆ, ನಾನು ನಿವೃತ್ತಿಯಾಗುತ್ತೇನೆ ಎಂದು ವೋಟು ಕೇಳುತ್ತಿದ್ದಾರೆ ಎಂಬ ಪ್ರಧಾನಿ ಮೋದಿ ಅವರ ಹೇಳಿಕೆಗೆ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ತಿರುಗೇಟು ಕೊಟ್ಟಿದ್ದಾರೆ.

ನರೇಂದ್ರ ಮೋದಿಯವರು ಏನನ್ನು ಹೇಳಲಿಕ್ಕೆ ಹೊರಟಿದ್ದಾರೆ? ಬಿ.ಎಸ್.ಯಡಿಯೂರಪ್ಪ ಅವರನ್ನು ವಯಸ್ಸಿನ ಕಾರಣಕ್ಕಾಗಿ ಮುಖ್ಯಮಂತ್ರಿ ಸ್ಥಾನದಿಂದ ಅವಮಾನಕಾರಿಯಾಗಿ ಕಿತ್ತುಹಾಕಿದ ಬಿಜೆಪಿ, ಈಗ ಅವರನ್ನೇ ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿರುವುದಕ್ಕೆ ಕಾರಣ ಅವರ ಮೇಲಿನ ಗೌರವವೇ? ಅಥವಾ ಅನುಕಂಪ ಗಳಿಕೆಯ ತಂತ್ರವೇ? ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ : ‘ಸಿದ್ದರಾಮಯ್ಯ ಸರ್ಕಾರ ರಾಜ್ಯದ ಅತ್ಯಂತ ಭ್ರಷ್ಟ ಸರ್ಕಾರ : ಸಿಎಂ ಬೊಮ್ಮಾಯಿ

ನಾನು ಆರೋಗ್ಯವಾಗಿದ್ದೇನೆ

ನಾನು ನಿವೃತ್ತಿಯಾಗುತ್ತೇನೆ ಎಂದು ಹೇಳುತ್ತಿರುವುದು ಚುನಾವಣಾ ರಾಜಕಾರಣದಿಂದಲೇ ಹೊರತು, ಸಕ್ರಿಯ ರಾಜಕಾರಣದಿಂದ ಅಲ್ಲ. ರಾಜಕೀಯದಲ್ಲಿ ಸಕ್ರಿಯವಾಗಿರುವಷ್ಟು ಆರೋಗ್ಯದಿಂದ ಇದ್ದೇನೆ. ಮೋದಿ ಅವರೇ ನೀವು ಸಿದ್ಧ ಅಂದ್ರೆ ನಿಮ್ಮ ಜೊತೆ ರನ್ನಿಂಗ್ ರೇಸ್ ಗೆ ನಾನೂ ಸಿದ್ಧ ಎಂದು ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿಯವರು ಇದ್ದಕ್ಕಿದ್ದಂತೆ ಸಿದ್ದರಾಮಯ್ಯನವರ ಕೈ ಹಿಡಿದು ಓಡಲು ಆರಂಭಿಸಿದ್ದರು. ತಮ್ಮೊಂದಿಗೆ ಓಡುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹುರಿದುಂಬಿಸಿದ್ದರು. ಈ ವಿಡೀಯೋವನ್ನು ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

Exit mobile version