Site icon PowerTV

ಇಂದು ಆರ್ ಸಿಬಿ-ಲಕ್ನೋ ಹೈವೋಲ್ಟೇಜ್ ಮ್ಯಾಚ್ : RCB ಗೆಲುವು ಕಸಿಯುತ್ತಾನಾ ‘ಕನ್ನಡಿಗ’?

ಬೆಂಗಳೂರು : ಐಪಿಎಲ್ ನಲ್ಲಿ ಇಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕನ್ನಡಿಗ ಕೆ.ಎಲ್ ರಾಹುಲ್ ಸಾರಥ್ಯದ ಲಖನೌ ಸೂಪರ್ ಜೇಂಟ್ಸ್ ತಂಡದ ವಿರುದ್ಧ ಸೆಣಸಲಿದೆ.

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಆರ್‌ಸಿಬಿಗೆ ಗೆಲುವು ಅನಿವಾರ್ಯವಾಗಿದೆ. ಆರ್ ಸಿಬಿ ಗೆಲುವು ಕಸಿದುಕೊಳ್ಳಲು ಕನ್ನಡಿಗ ಕೆ.ಎಲ್ ರಾಹುಲ್ ಪಡೆ ಸಜ್ಜಾಗಿದೆ.

ಸದ್ಯ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ತಂಡ ಆಡಿರುವ 8 ಪಂದ್ಯಗಳಲ್ಲಿ ನಾಲ್ಕು ಪಂದ್ಯ ಗೆದ್ದು 8 ಅಂಕಗಳನ್ನು ಸಂಪಾದಿಸಿದೆ. ಲಕ್ನೋ ತಂಡ ತಾನಾಡಿರುವ 8 ಪಂದ್ಯಗಳಲ್ಲಿ ಐದು ಪಂದ್ಯ ಗೆದ್ದು 10 ಅಂಕಗಳನ್ನು ಪಡೆದುಕೊಂಡಿದೆ. ಹೀಗಾಗಿ, ಇಂದಿನ ಪಂದ್ಯದಲ್ಲಿ ಎರಡೂ ತಂಡಗಳಿಗೂ ಗೆಲುವು ಅನಿವಾರ್ಯವಾಗಿದೆ.

ಇದನ್ನೂ ಓದಿ : ಚಿನ್ನಸ್ವಾಮಿಯಲ್ಲಿ ‘ಕಿಂಗ್ ಕೊಹ್ಲಿ’ ಮತ್ತೊಂದು ದಾಖಲೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು

ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹರ್ಷಲ್ ಪಟೇಲ್, ವನಿಂದು ಹಸರಂಗ, ವ್ಯಾನ್ ಪಾರ್ನೆಲ್, ವೈಶಾಕ್ ವಿಜಯ್ ಕುಮಾರ್, ಮೊಹಮ್ಮದ್ ಸಿರಾಜ್

ಲಖನೌ ಸೂಪರ್ ಜೈಂಟ್ಸ್

ಕೆ.ಎಲ್ ರಾಹುಲ್ (ನಾಯಕ/ವಿಕೆಟ್ ಕೀಪರ್), ಖೈಲ್ ಮೇಯರ್ಸ್, ದೀಪಕ್ ಹೂಡಾ, ಕ್ರುನಾಲ್ ಪಾಂಡ್ಯ, ಮಾರ್ಕಸ್ ಸ್ಟೋಯಿನಿಸ್, ನಿಕೋಲಸ್ ಪೂರನ್, ಆಯುಷ್ ಬದೋನಿ, ಮಾರ್ಕ್ ವುಡ್, ಜಯದೇವ್ ಉನಾದ್ಕಟ್, ರವಿ ಬಿಷ್ಣೋಯ್/ ಅಮಿತ್ ಮಿಶ್ರಾ, ಅವೇಶ್ ಖಾನ್

Exit mobile version