Site icon PowerTV

ಟಾಸ್ ಗೆದ್ದ ಡು ಪ್ಲೆಸಿಸ್ ಬ್ಯಾಟಿಂಗ್ ಆಯ್ಕೆ : ‘ಲಕ್ನೋ’ ಬಗ್ಗುಬಡಿಯುತ್ತಾ ಆರ್ ಸಿಬಿ

ಬೆಂಗಳೂರು : ಇಂದಿನ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಖನೌ ಸೂಪರ್ ಜೇಂಟ್ಸ್ ಸೆಣಸಲಿದ್ದು, ಟಾಸ್ ಗೆದ್ದ ಆರ್ ಸಿಬಿ ನಾಯಕ ಡು ಪ್ಲೆಸಿಸ್ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. 

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಆರ್‌ಸಿಬಿಗೆ ಗೆಲುವು ಅನಿವಾರ್ಯವಾಗಿದೆ. ಇತ್ತ, ಇಂದಿನ ಪಂದ್ಯದಲ್ಲಿ ಆರ್ ಸಿಬಿಯನ್ನು ಬಗ್ಗುಬಡಿದು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ಕನ್ನಡಿಗ ಕೆ.ಎಲ್ ರಾಹುಲ್ ಪಡೆ ರಣತಂತ್ರ ರೂಪಿಸಿದೆ.

ಪಂದ್ಯ ರಾತ್ರಿ 7.30ಕ್ಕೆ ಶುರುವಾಗಲಿದೆ. ಆರ್‌ಸಿಬಿ ತಂಡ ಆಡಿರುವ 8 ಪಂದ್ಯಗಳಲ್ಲಿ ನಾಲ್ಕು ಪಂದ್ಯ ಗೆದ್ದು 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಲಕ್ನೋ ತಂಡ 8 ಪಂದ್ಯಗಳಲ್ಲಿ ಐದು ಪಂದ್ಯ ಗೆದ್ದು 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.

ಇದನ್ನೂ ಓದಿ : ಜಡೇಜಾ ಹೊಸ ದಾಖಲೆ : ಈ ಸಾಧನೆ ಮಾಡಿದ 8ನೇ ಕ್ರಿಕೆಟಿಗ ಜಡ್ಡು

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 

ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಅನೂಜ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹರ್ಷಲ್ ಪಟೇಲ್, ವನಿಂದು ಹಸರಂಗ, ವ್ಯಾನ್ ಪಾರ್ನೆಲ್, ಕರಣ್ ಶರ್ಮಾ, ಮೊಹಮ್ಮದ್ ಸಿರಾಜ್, ಹ್ಯಾಜಲ್​ವುಡ್

ಲಖನೌ ಸೂಪರ್ ಜೈಂಟ್ಸ್ ತಂಡ

ಕೆ.ಎಲ್ ರಾಹುಲ್ (ನಾಯಕ/ವಿಕೆಟ್ ಕೀಪರ್), ಖೈಲ್ ಮೇಯರ್ಸ್, ದೀಪಕ್ ಹೂಡಾ, ಕ್ರುನಾಲ್ ಪಾಂಡ್ಯ, ಮಾರ್ಕಸ್ ಸ್ಟೋಯಿನಿಸ್, ನಿಕೋಲಸ್ ಪೂರನ್, ಆಯುಷ್ ಬದೋನಿ, ಮಾರ್ಕ್ ವುಡ್, ರವಿಸಿಂಗ್ ಟಾಕೂರ್, ರವಿ ಬಿಷ್ಣೋಯ್, ಅವೇಶ್ ಖಾನ್

Exit mobile version