Site icon PowerTV

ಸುರೇಶ್ ಕುಮಾರ್ ‘ರಾಜಾಜಿನಗರ ಅಭಿವೃದ್ಧಿಗೆ ಪಣ’ ತೊಟ್ಟಿದ್ದಾರೆ : ಸಚಿವ ಕೆ.ಗೋಪಾಲಯ್ಯ

ಬೆಂಗಳೂರು : ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಅವರ ಪರವಾಗಿ ಅಬಕಾರಿ ಸಚಿವ ಹಾಗೂ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಗೋಪಾಲಯ್ಯ ಪ್ರಚಾರ ನಡೆಸಿದರು.

ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಿವನಹಳ್ಳಿ ಸುತ್ತಮುತ್ತಲಿನ ಪ್ರಮುಖ ಸರ್ಕಲ್ ಗಳಲ್ಲಿ ಸಚಿವ ಕೆ.ಗೋಪಾಲಯ್ಯ ಅವರು ಭರ್ಜರಿ ರೋಡ್ ಶೋ ನಡೆಸಿ ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಸುರೇಶ್ ಕುಮಾರ್ ಪರವಾಗಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿರುವ ಅವರು, ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಪಕ್ಷ ಹಾಗೂ ಸರ್ಕಾರ ಬದ್ಧವಾಗಿದೆ. ರಾಜಾಜಿನಗರದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುರೇಶ್ ಕುಮಾರ್ ಅವರನ್ನು ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ ಎಂದು ಮನವಿ ಮಾಡಿದರು.

ರಾಜಾಜಿನಗರ ಅಭಿವೃದ್ಧಿಗೆ ಪಣ

ರಾಜಾಜಿನಗರ ಕ್ಷೇತ್ರದ ಅಭಿವೃದ್ಧಿಗೆ ಸುರೇಶ್ ಕುಮಾರ್ ಅವರು ಪಣ ತೊಟ್ಟಿದ್ದಾರೆ. ಕ್ಷೇತ್ರದ ಜನತೆ ಈ ಬಾರಿಗೆ ಅವರಿಗೊಂದು ಅವಕಾಶ ನೀಡಬೇಕು. ಆ ಮೂಲಕ ನಿಮ್ಮ ಸೇವೆ ಮಾಡಲು ಅವರಿಗೆ ಅನುವು ಮಾಡಿಕೊಡಬೇಕು ಎಂದು ಮತದಾರರಲ್ಲಿ ಕೋರಿದರು.

ಇದನ್ನೂ ಓದಿ : ಮಾರುಕಟ್ಟೆ ತೆರವು ವಿರೋಧಿಸಿ ಹೆದ್ದಾರಿ ತಡೆ ಮಾಡಿದ್ದೆ : ಸಚಿವ ಕೆ.ಗೋಪಾಲಯ್ಯ

ಈ ಸಂದರ್ಭದಲ್ಲಿ ಓಬಿಸಿ ಅಧ್ಯಕ್ಷ ನೆ.ಲ ನರೇಂದ್ರಬಾಬು, ಮಾಜಿ ಮಹಾ ಪಾಲಿಕೆ ಸದಸ್ಯ ಮಂಜುನಾಥ್, ಬಿಜೆಪಿ ಮುಖಂಡರಾದ ಗಂಗಾಧರ್ ಹಾಗೂ ಸ್ಥಳೀಯ ಬಿಜೆಪಿ ಮುಖಂಡರುಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿ ಕಾರ್ಯಾಲಯದಲ್ಲಿ ಸಚಿವ ಕೆ.ಗೋಪಾಲಯ್ಯ ಅವರು ಯೋಗ ಪಟುಗಳ ಜೊತೆಗೆ ಸಮಾಲೋಚನೆ ನೆಡೆಸಿ, ಚರ್ಚಿಸಿದರು. ಈ ವೇಳೆ ಮಹೇಶ್, ವೆಂಕಟೇಶ್ ಮೂರ್ತಿ ಹಾಗೂ ಸ್ಥಳೀಯ ಮುಖಂಡರು ಇದ್ದರು.

Exit mobile version