Site icon PowerTV

ಇಂದು ರಾಜ್ಯಕ್ಕೆ ಸೋನಿಯಾ ಗಾಂಧಿ : ಹುಬ್ಬಳ್ಳಿ ಸಮಾವೇಶದಲ್ಲಿ ಭಾಗಿ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್​ ನಾಯಕಿ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ.

ಚುನಾವಣೆ ಘೋಷಣೆಯಾದ ಬಳಿಕ ಮೊಟ್ಟಮೊದಲ ಬಾರಿಗೆ ರಾಜ್ಯಕ್ಕೆ ಸೋನಿಯಾ ಗಾಂಧಿ ಬರುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ನಡೆಸಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ದೆಹಲಿಯಿಂದ ಹುಬ್ಬಳ್ಳಿಗೆ ಆಗಮಿಸಲಿರುವ ಸೋನಿಯಾ ಗಾಂಧಿಯವರು, ನಗರದ ಸೆಟ್ಲಮೆಂಟ್‌ನ ಹಾಕಿ ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ : ಪ್ರಧಾನಿ ಮೋದಿ ರೋಡ್ ಶೋ ಆರಂಭ, ದಾರಿಯುದ್ದಕ್ಕೂ ಹೂವಿನ ಸುರಿಮಳೆ

ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಜಗದೀಶ್​ ಶೆಟ್ಟರ್​ ಪರ ಮತಯಾಚಿಸಲಿದ್ದಾರೆ. ಸಾಯಂಕಾಲ 6 ಗಂಟೆಯವರೆಗೆ ಸಮಾವೇಶ ನಡೆಯಲಿದೆ. ಕಾರ್ಯಕ್ರಮ ಮುಗಿಸಿ ಮತ್ತೆ ಹುಬ್ಬಳ್ಳಿಯಿಂದ ದೆಹಲಿಗೆ ವಿಶೇಷ ವಿಮಾನದ ಮೂಲಕ ಪ್ರಯಾಣ ಬೆಳಸಲಿದ್ದಾರೆ.

ಬೆಳಗಾವಿಯಲ್ಲಿ ರಾಗಾ ಪ್ರಚಾರ

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಇಂದು ಬೆಳಗಾವಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಯಮಕನಮರಡಿ ಕ್ಷೇತ್ರದ ಭೂತರಾಮನಹಟ್ಟಿ, ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ಮತಯಾಚಿಸಲಿದ್ದಾರೆ. ಮಧ್ಯಾಹ್ನ 2 ಕ್ಕೆ ಯಮಕನಮರಡಿ ಕ್ಷೇತ್ರದ ಭೂತರಾಮನಹಟ್ಟಿಯಲ್ಲಿ ಕಾಂಗ್ರೆಸ್‌ ಚುನಾವಣಾ ಪ್ರಚಾರ ಸಭೆ ನಡೆಸಲಿದ್ದಾರೆ.

Exit mobile version