Site icon PowerTV

ಸಾಹ, ಗಿಲ್ ಸ್ಫೋಟಕ ಬ್ಯಾಟಿಂಗ್ : ಲಕ್ನೋಗೆ 228 ರನ್ ಬೃಹತ್ ಗುರಿ

ಬೆಂಗಳೂರು : ಗುಜರಾತ್ ಟೈಟನ್ಸ್ ತಂಡ ಲಕ್ನೋ ಗೆಲುವಿಗೆ 228 ರನ್ ಗಳ ಬೃಹತ್ ಟಾರ್ಗೆಟ್ ನೀಡಿದೆ. ಅಹಮದಾಬಾದ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 20 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 227 ರನ್ ಗಳಿಸಿತು.

ಆರಂಭಿಕ ಆಟಗಾರರಾದ ವೃದ್ಧಿಮಾನ್ ಸಾಹ ಹಾಗೂ ಶುಭಮನ್ ಗಿಲ್ ಸ್ಫೋಟಕ ಬ್ಯಾಟಿಂಗ್ ಮಾಡಿದರು. ಮೊದಲ ವಿಕೆಟ್‌ಗೆ 142 ರನ್ ಜೊತೆಯಾಟವಾಡಿದರು.

ವೃದ್ಧಿಮಾನ್ ಸಾಹ 43 ಎಸೆತಗಳಲ್ಲಿ 81 ರನ್ ಗಳಿಸಿದರೆ, ಶುಭಮನ್ ಗಿಲ್ 51 ಎಸೆತಗಳಲ್ಲಿ ಅಜೇಯ 94 ರನ್ ಬಾರಿಸಿದರು. ನಾಯಕ ಹಾರ್ದಿಕ್ ಪಾಂಡ್ಯಾ 25 ಗಳಿಸಿ ಔಟಾದರು. ಮಿಲ್ಲರ್ 21 ರನ್ ಗಳಿಸಿದರು. ಲಕ್ನೋ ಪರ ಮೊಹ್ಸಿನ್ ಖಾನ್ ಹಾಗೂ ಅವೇಶ್ ಖಾನ್ ತಲಾ ಒಂದು ವಿಕೆಟ್ ಪಡೆದರು.

ಗುಜರಾತ್ ಟೈಟಾನ್ಸ್ ಆಡಿರುವ 10 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಪ್ರಥಮ ಸ್ಥಾನದಲ್ಲಿದೆ. ಲಕ್ನೋ ತಂಡ ಆಡಿರುವ 10 ಪಂದ್ಯಗಳಲ್ಲಿ 5 ಪಂದ್ಯಗಳನ್ನು ಗೆದ್ದು 11 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ. ಈ ಪಂದ್ಯವನ್ನು ಗೆದ್ದು ಗುಜಾರಾತ್ ಪ್ಲೇ ಆಫ್ ಟಿಕೆಟ್ ಅನ್ನು ಬಹುತೇಕ ಖಚಿತಪಡಿಸಿಕೊಳ್ಳಲು ಹವಣಿಸುತ್ತಿದೆ.

ಇದನ್ನೂ ಓದಿ : ಜಡೇಜಾ ಹೊಸ ದಾಖಲೆ : ಈ ಸಾಧನೆ ಮಾಡಿದ 8ನೇ ಕ್ರಿಕೆಟಿಗ ಜಡ್ಡು

ಗುಜರಾತ್ ಟೈಟಾನ್ಸ್

ವೃದ್ಧಿಮಾನ್ ಸಹಾ, ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ

ಲಕ್ನೋ ತಂಡ

ಕ್ವಿಂಟನ್ ಡಿ ಕಾಕ್, ಕೈಲ್ ಮೇಯರ್ಸ್, ದೀಪಕ್ ಹೂಡಾ, ಕರಣ್ ಶರ್ಮಾ, ಕೃನಾಲ್ ಪಾಂಡ್ಯ, ಮಾರ್ಕಸ್ ಸ್ಟೋನಿಸ್, ಸ್ವಪ್ನಿಲ್ ಸಿಂಗ್, ಯಶ್ ಠಾಕೂರ್, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಅವೇಶ್ ಖಾನ್

Exit mobile version