Tuesday, August 26, 2025
Google search engine
HomeUncategorizedಕ್ಷೇತ್ರದ ಮತ್ತಷ್ಟು ಅಭಿವೃದ್ಧಿಗೆ ಮತ್ತೊಮ್ಮೆ ಬಿಜೆಪಿಗೆ ಮತ ನೀಡಿ : ಸಚಿವ ಕೆ.ಗೋಪಾಲಯ್ಯ

ಕ್ಷೇತ್ರದ ಮತ್ತಷ್ಟು ಅಭಿವೃದ್ಧಿಗೆ ಮತ್ತೊಮ್ಮೆ ಬಿಜೆಪಿಗೆ ಮತ ನೀಡಿ : ಸಚಿವ ಕೆ.ಗೋಪಾಲಯ್ಯ

ಬೆಂಗಳೂರು : ಮೇ 10 ರಂದು ಚುನಾವಣೆ ನಡೆಯಲಿದ್ದು, ಮಹಾಲಕ್ಷ್ಮಿ ಲೇಔಟ್ ನಲ್ಲಿ ಮತ್ತಷ್ಟು ಅಭಿವೃದ್ಧಿಗಾಗಿ ಮತ್ತೊಮ್ಮೆ ಬಿಜೆಪಿ ಪಕ್ಷಕ್ಕೆ ಮತ ನೀಡಿ, ತಮ್ಮನ್ನು ಅಧಿಕ ಮತಗಳ ಅಂತರದಿಂದ ಗೆಲ್ಲಿಸಿ ಎಂದು ಅಬಕಾರಿ ಸಚಿವ ಹಾಗೂ ಮಹಾಲಕ್ಷ್ಮಿ ಲೇಔಟ್ ಬಿಜೆಪಿ ಅಭ್ಯರ್ಥಿ ಕೆ.ಗೋಪಾಲಯ್ಯ ಮನವಿ ಮಾಡಿದರು.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕೃಷ್ಣಾನಂದ ನಗರ, ಯಶವಂತಪುರ ಸೇರಿದಂತೆ ತಮ್ಮ ಕ್ಷೇತ್ರದಲ್ಲಿರುವ  ಗಾರ್ಮೆಂಟ್ಸ್ ನೌಕರರ ಬಳಿ ಸಭೆ ನಡೆಸಿ ಮಾತನಾಡಿದರು. ಕೋವಿಡ್ ನಂತಹ ಮಹಾಮಾರಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಬಿಜೆಪಿ ಸರ್ಕಾರವು ಜನಸಾಮಾನ್ಯರಿಗೆ ಆಕ್ಸಿಜನ್ ಹಾಗೂ ಉಚಿತ ಲಸಿಕೆಯನ್ನು ಒದಗಿಸಲಾಗಿದೆ ಎಂದರು.

ಕೋವಿಡ್ ಅವಧಿಯಲ್ಲಿ 350 ಕ್ಕೂ ಹೆಚ್ಚಿನ ಆಕ್ಸಿಜನ್ ಸಿಲಿಂಡರ್ ಗಳನ್ನು ನೀಡಿ ಕ್ಷೇತ್ರದ ಜನತೆಯ ಉಳಿವಿಗಾಗಿ ಶ್ರಮವಹಿಸಿ ಕಾರ್ಯನಿರ್ವಹಣೆ ಹೀಗೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಕ್ಷೇತ್ರವನ್ನು ಇನ್ನೂ ಅಭಿವೃದ್ಧಿ ಮಾಡಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.

ಇದನ್ನೂ ಓದಿ : ಸುರೇಶ್ ಕುಮಾರ್ ‘ಯಾರ ತಂಟೆಗೂ ಹೋಗದ ಸರಳ, ಸಜ್ಜನರು’ : ಸಚಿವ ಕೆ.ಗೋಪಾಲಯ್ಯ

ಇದಕ್ಕೂ ಮುನ್ನ ಮಹಾಲಕ್ಷ್ಮಿ ಕ್ಷೇತ್ರದ ಮರಿಯಪ್ಪನ ಪಾಳ್ಯದ 44ನೇ ವಾರ್ಡಿನ ಕಿರ್ಲೋಸ್ಕರ್ ಫೌಂಡ್ರಿಯಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದರು. ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಕಳೆದ 9 ವರ್ಷಗಳಿಂದ ಆಗಿರುವ ಕುರಿತು ಮಾಹಿತಿ ನೀಡಿದರು. ಬಳಿಕ, ನಂದಿನಿ ಬಡಾವಣೆ ಬಿಎಂಟಿಎಸ್ ಬಸ್ ನಿಲ್ದಾಣದ ಹತ್ತಿರ ಉತ್ತರ ಕನ್ನಡ ಭವನದಲ್ಲಿ ರೋಟರಿ ನಂದಿನಿ ಮತ್ತು ನಂದಿನಿ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿದರು.

ಗೋಪಾಲಯ್ಯ ಪರ ಪತ್ನಿ ಪ್ರಚಾರ

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಕ್ತಿ ಗಣಪತಿ ನಗರದ 102 ನೇ ವಾರ್ಡ್ ನಲ್ಲಿ ಸಚಿವ ಕೆ.ಗೋಪಾಲಯ್ಯ ಅವರ ಪತ್ನಿ, ಮಾಜಿ ಉಪಮೇಯರ್ ಹೇಮಲತಾ ಮತಯಾಚನೆ ಮಾಡಿದರು. ಹೇಮಂತ್, ಸ್ವಾಮಿ, ಎಸ್. ಪಿ.ಉಮೇಶ್, ವಾರ್ಡ್ ಅಧ್ಯಕ್ಷೆ ರತ್ನಮ್ಮ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments