Site icon PowerTV

ಚಾಮುಂಡೇಶ್ವರಿ ಸನ್ನಿಧಿಯಲ್ಲಿ ‘ಸಿದ್ದು-ಡಿಕೆಶಿ ಒಗ್ಗಟ್ಟು’ ಪ್ರದರ್ಶನ

ಬೆಂಗಳೂರು : ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣಾ ಮತದಾನ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಒಟ್ಟಿಗೆ ಟೆಂಪಲ್ ರನ್ ನಡೆಸಿದ್ದಾರೆ.

ಕೆ.ಆರ್.ಮಾರುಕಟ್ಟೆಯ ಆಂಜನೇಯಸ್ವಾಮಿ ದೇಗುಲಕ್ಕೆ ಡಿ.ಕೆ ಶಿವಕುಮಾರ್ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಬಳಿಕ ಸಿದ್ದು-ಡಿಕೆಶಿ ಒಟ್ಟಿಗೆ ಚಾಮುಂಡೇಶ್ವರಿ ಮೊರೆ ಹೋಗಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಂದು ಮೈಸೂರಿನಲ್ಲಿ ಪರಸ್ಪರ ಭೇಟಿಯಾಗಿ, ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದಾರೆ.

ನಾಳೆ ಮತದಾನ ನಡೆಯಲಿದ್ದು, ನಿನ್ನೆ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಹೀಗಾಗಿ ಇಬ್ಬರು ನಾಯಕರು ಒಟ್ಟಾಗಿ ಭೇಟಿ ಮಾಡಿ ಚರ್ಚೆ ನಡೆಸಿದ್ದು, ಉಭಯ ನಾಯಕರು ಚಾಮುಂಡಿಬೆಟ್ಟಕ್ಕೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಇದನ್ನೂ ಓದಿ : ‘ಭಜರಂಗಬಲಿ ಕೀ ಜೈ’ : ಹನುಮನ ಜಪ ಮಾಡಿದ ಕಮಲ ನಾಯಕರು

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯರ ನೀಡಿರುವ ಸಿದ್ದರಾಮಯ್ಯ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಜೊತೆ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿ, ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದೆ ಎಂದು ಬರೆದುಕೊಂಡಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಪಕ್ಷ ಘೋಷಿಸಿರುವ ಗ್ಯಾರೆಂಟಿಗಳನ್ನು ಜಾರಿಗೆ ತರುವುದಾಗಿ ಪ್ರಮಾಣ ಮಾಡಿದ್ದೇವೆ. ಇತರರ ಅಪಪ್ರಚಾರಗಳಿಗೆ ಕಿವಿಗೊಡಬೇಡಿ, ನಾಡಿನ ಪ್ರತಿಯೊಬ್ಬರು ನಮ್ಮಲ್ಲಿ ಪೂರ್ಣ ವಿಶ್ವಾಸವಿಡಿ, ನಮ್ಮ ಗ್ಯಾರೆಂಟಿಗಳನ್ನು ನೂರಕ್ಕೆ ನೂರು ಜಾರಿಗೆ ಕೊಡುತ್ತೇವೆ ಎಂಬ ಸಂದೇಶ ರವಾನಿಸಿದ್ದಾರೆ.

Exit mobile version