Site icon PowerTV

ನಾಳೆ ಮತದಾನಕ್ಕೆ ‘ವರುಣನ ಕಂಟಕ’ : ಮತದಾನಕ್ಕೆ ಅಡ್ಡಿಯಾಗಲಿದೆಯೇ ಮೋಚಾ ಚಂಡಮಾರುತ?

ಬೆಂಗಳೂರು : ನಾಳೆ ರಾಜ್ಯ ವಿಧಾನಸಭಾ ಚುನಾವಣೆಗೆ ಮಳೆ ಅಡ್ಡಿಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಎ.ಪ್ರಸಾದ್ ಮಾಹಿತಿ ನೀಡಿದ್ದಾರೆ.

ಹೌದು, ಮಳೆ ಮುನ್ಸೂಚನೆ ನಡುವೆಯೂ ಚುನಾವಣಾ ಆಯೋಗ ಮೇ 10ರಂದು ನಡೆಯಲಿರುವ ಮತದಾನಕ್ಕೆ ಸಕಲ ಸಿದ್ಧತೆ ನಡೆಸಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 10 ರಿಂದ 12 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ರಾಜ್ಯಾದ್ಯಂತ ಇನ್ನೂ 5 ದಿನಗಳ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರದಲ್ಲಿ ಮಳೆ ಸಾಧ್ಯತೆಯಿದೆ.

Exit mobile version