Site icon PowerTV

ಮತದಾರರಿಗೆ ಪ್ರಧಾನಿ ಮೋದಿ ಸಂದೇಶ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ಟರ್‌ ಹ್ಯಾಂಡಲ್‌ನಲ್ಲಿ ಕರ್ನಾಟಕದ ಮತದಾರರನ್ನು ಉದ್ದೇಶಿಸಿ ಸಂದೇಶ ಕಳುಹಿಸಿದ್ದಾರೆ.

ಬಹಿರಂಗ ಪ್ರಚಾರ ಅಂತ್ಯವಾಗಿರುವುದರಿಂದ ಎಚ್ಚರಿಕೆಯಿಂದ ಬಿಜೆಪಿ ಪರ ಪ್ರಚಾರ ಮಾಡದೆ, ಕನ್ನಡಿಗರಿಗೆ ಮತದಾನ ಜಾಗೃತಿ ಮೂಡಿಸುವಂತಹ ಸಂದೇಶ ನೀಡಿದ್ದಾರೆ.

ಪ್ರತಿಯೊಬ್ಬ ಕನ್ನಡಿಗರ ಕನಸು ನನ್ನ ಸ್ವಂತ ಕನಸು, ನಿಮ್ಮ ಆಶಯ ನನ್ನ ಆಶಯ ಎಂದು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ. ಕರ್ನಾಟಕವನ್ನು ನಂಬರ್ ಒನ್ ಮಾಡಲು, ಮೇ 10ರಂದು ನಿಮ್ಮೆಲ್ಲರನ್ನೂ ಜವಾಬ್ದಾರಿಯುತ ನಾಗರಿಕರಾಗಿ ಮತ ಚಲಾಯಿಸುವಂತೆ ನಾನು ವಿನಂತಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇದನ್ನೂ ಓದಿ : ಹನುಮನ ಜಪ ಮಾಡಿದ ಕಮಲ ನಾಯಕರು

ಅಂಚೆ ಮತದಾನಕ್ಕೆ ಅವಕಾಶ

ಮತದಾನ ಪರಿಪೂರ್ಣವಾಗಿ ನಡೆಯುವ ಉದ್ಧೇಶದಿಂದ ಚುನಾವಣಾ ಆಯೋಗ ಎಲ್ಲಾ ರೀತಿಯ ಅವಕಾಶವನ್ನು ಮಾಡಿಕೊಟ್ಟಿದೆ. ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾದ ಸಿಬ್ಬಂದಿಗಳಿಗೆ ಅಂಚೆ ಮತದಾನದ ಅವಕಾಶ ಮಾಡಿಕೊಡಲಾಗಿದೆ.

ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಸಿಬ್ಬಂದಿಗಳಿಗೆ ಈ ಅವಕಾಶವನ್ನು ನೀಡಲಾಗಿದ್ದು, ಸಿಬ್ಬಂದಿಗಳು ಬ್ಯಾಲೆಟ್ ಪೇಪರ್ ಮೂಲಕ ಯೋಗ್ಯ ಅಭ್ಯರ್ಥಿಗೆ ಮತದಾನ ಮಾಡಬಹುದಾಗಿದೆ.. ಮಹಾರಾಣಿ ಹೋಮ್ ಸೈನ್ಸ್ ಕಾಲೇಜಿನಲ್ಲಿ ಮತದಾನಕ್ಕೆ ಅವಕಾಶ ನೀಡಲಾಗಿದೆ.

Exit mobile version