Site icon PowerTV

ಚಿಕ್ಕಬಳ್ಳಾಪುರದಲ್ಲಿ ಡಾ.ಕೆ ಸುಧಾಕರ್ ಮತದಾನ

ಚಿಕ್ಕಬಳ್ಳಾಪುರ :  ಇಂದು ಪ್ರಜಾಪ್ರಭುತ್ವದ ಹಬ್ಬ. 224 ಕ್ಷೇತ್ರಗಳಲ್ಲಿಯೂ ಮತದಾರರು ಉತ್ಸಾಹದಿಂದ ಬಂದು ಮತ ಚಲಾಯಿಸುತ್ತಿದ್ದಾರೆ.

ಹೌದು, ಇಂದು ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್ ಚಿಕ್ಕಬಳ್ಳಾಪುರದ ಪೆರೇಸಂದ್ರದ ಮತಗಟ್ಟೆಗೆ ತೆರಳಿ ಇಂದು ಕುಟುಂಬ ಸಮೇತ ಮತದಾನ ಮಾಡಿದ್ದಾರೆ.

ಮತದಾನ ಮಾಡಿ ಮಾತನಾಡಿದ ಕೆ. ಸುಧಾಕರ್ ಪ್ರಜಾಪ್ರಭುತ್ವದಲ್ಲಿ ಮತದಾನ ನಾಗರೀಕರ ಹಕ್ಕು ಮಾತ್ರವಲ್ಲ, ಕರ್ತವ್ಯವೂ ಹೌದು. ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಿ, ಸದೃಢ, ಸಮೃದ್ಧ ಕರ್ನಾಟಕ ನಿರ್ಮಾಣದಲ್ಲಿ ಪಾಲುದಾರರಾಗಿ ಎಂದು ಮನವಿ ಮಾಡಿದ್ದಾರೆ.

Exit mobile version