Site icon PowerTV

ಸಿದ್ದು-ಡಿಕೆಶಿಗೆ ಸಂ’ಕಷ್ಟ’ : ‘ಸಿಎಂ ಮಾಡಿದ್ರೆ ಬೇಡ ಅನ್ನಲ್ಲ’ ಎಂದ ಪರಂ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಮತದಾನದ ಬಳಿಕ ಮತಗಟ್ಟೆ ಸಮೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವ ಸಾಧ್ಯತೆಯಿದೆ ಎಂಬ ಮುನ್ಸೂಚನೆ ದೊರೆತಿದ್ದು, ಸಿಎಂ ರೇಸ್ ನಲ್ಲಿರುವವರ ಆಸೆ ಮತ್ತಷ್ಟು ಚಿಗುರೊಡೆದಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರಾಜ್ಯದ ಮುಂದಿನ ಸಿಎಂ ಯಾರು? ಎಂಬ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಈ ಮಧ್ಯೆ, ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಅವರು ಧ್ವನಿಗೂಡಿಸಿದ್ದಾರೆ. ಸಿಎಂ ಆಯ್ಕೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಲ್‌ಪಿ ಸಭೆಯಲ್ಲಿ ಸಿಎಂ ಯಾರಾಗಬೇಕು ಎಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಅಭಿಮಾನಿಗಳ ಅಪೇಕ್ಷೆ ಮೇರೆಗೆ ಯಾರನ್ನೂ ಸಿಎಂ ಮಾಡುವುದಿಲ್ಲ ಎಂದಿದ್ದಾರೆ. ಜೊತೆಗೆ, ಹೈಕಮಾಂಡ್ ನನ್ನನ್ನು ಸಿಎಂ ಮಾಡಿದರೆ ಬೇಡ ಎನ್ನಲು ಆಗುತ್ತಾ? ಎಂದು ಹೇಳುವ ಮೂಲಕ ತಾನೂ ಸಿಎಂ ರೇಸ್‌ನಲ್ಲಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : ಕಳೆದ ಬಾರಿ ‘ಹೊಸ ಕೋಟು ಹೊಲಿಸಿಕೊಂಡಿದ್ದರು’ : ಶೋಭಾ ಕರಂದ್ಲಾಜೆ ಲೇವಡಿ

ಸಿದ್ದು-ಡಿಕೆಶಿ ಇಬ್ಬರೂ ಸಿಎಂ ಆಗಲಿ

ಮತ್ತೊಂದೆಡೆ, ಮಾಜಿ ಸಚಿವ ಕೃಷ್ಣಭೈರೇಗೌಡ ಅವರು, ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರಿಗೂ ಕೂಡಾ ಸಿಎಂ ಆಗಲು ಅವಕಾಶ ನೀಡಬೇಕು ಎಂದು ಹೇಳಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಉತ್ತಮ ಆಡಳಿತ ನೀಡಿದ್ದರು. ಅವರೊಬ್ಬ ಜನಪ್ರಿಯ ನಾಯಕ, ಹಾಗೆಯೇ, ಡಿಕೆಶಿ ಪಕ್ಷ ಸಂಘಟನೆ ಮಾಡಿದ್ದಾರೆ. ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ. ಇಬ್ಬರೂ ಸಿಎಂ ಗಾದಿಗೆ ಅರ್ಹರಾಗಿದ್ದು, ಇಬ್ಬರಿಗೂ ಅವಕಾಶ ಸಿಗಬೇಕು ಎಂದು ತಿಳಿಸಿದ್ದಾರೆ.

Exit mobile version