Site icon PowerTV

KKR vs RR ಹೈವೋಲ್ಟೇಜ್ ಮ್ಯಾಚ್ : ಇಬ್ಬರಿಗೂ ಗೆಲುವು ಅನಿವಾರ್ಯ

ಬೆಂಗಳೂರು : ಐಪಿಎಲ್ 16ನೇ ಆವೃತ್ತಿಯ ಇಂದಿನ ಪಂದ್ಯದಲ್ಲಿ ನಿತೀಶ್ ರಾಣ ಸಾರಥ್ಯದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಕಾದಾಡಲಿದೆ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಬಿಗ್ ಫೈಟ್ ನಿರೀಕ್ಷಿಸಲಾಗಿದೆ.

ಟೂರ್ನಿಯಲ್ಲಿ ಎರಡೂ ತಂಡಗಳು ಆಡಿರುವ 11 ಪಂದ್ಯಗಳಲ್ಲಿ ಐದು ಗೆಲುವು, ಆರು ಸೋಲು ಕಂಡಿವೆ. ರಾಜಸ್ಥಾನ ತಂಡ ರನ್​ರೇಟ್ ಆಧಾರದ ಮೇಲೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಕೋಲ್ಕತ್ತಾ 6ನೇ ಸ್ಥಾನದಲ್ಲಿದೆ. ಹೀಗಾಗಿ, ಇಂದಿನ ಪಂದ್ಯದ ಗೆಲುವು ಇತ್ತಂಡಗಳಿಗೂ ಅನಿವಾರ್ಯವಾಗಿದೆ.

ಇದನ್ನೂ ಓದಿ : ತವರು ಅಂಗಳದಲ್ಲೇ ಆರ್​ಸಿಬಿಗೆ ಹೀನಾಯ ಸೋಲು

ರಾಜಸ್ಥಾನ್ ರಾಯಲ್ಸ್

ಸಂಜು ಸ್ಯಾಮ್ಸನ್ (ನಾಯಕ/ವಿ.ಕೀ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್

ಕೋಲ್ಕತ್ತಾ ತಂಡ

ನಿತೀಶ್ ರಾಣಾ (ನಾಯಕ), ಜೇಸನ್ ರಾಯ್, ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ಸುನಿಲ್ ನರೈನ್, ರಿಂಕು ಸಿಂಗ್, ವೈಭವ್ ಅರೋರಾ, ಶಾರ್ದೂಲ್ ಠಾಕೂರ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ

Exit mobile version