Site icon PowerTV

ಬಿಗ್ ಶಾಕ್ : ಕಾರ್ಯಕರ್ತರೇ ಸಿಎಂ ಆಗುತ್ತಾರೆ ಎಂದ ಕೇಂದ್ರ ಸಚಿವೆ

ಬೆಂಗಳೂರು : ಈ ಬಾರಿ ನಮ್ಮ ಕಾರ್ಯಕರ್ತ ಒಬ್ಬರು ಮುಖ್ಯಮಂತ್ರಿ ಆಗುತ್ತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ತಾವು ಮುಖ್ಯಮಂತ್ರಿಯಾಗುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಸಿಎಂ ಸ್ಥಾನದ ವಿಚಾರ ಬಂದಾಗ ನಾನು ರಾಜ್ಯಕ್ಕೆ ಬರುವ ಪ್ರಶ್ನೆ ಇಲ್ಲ. ನನಗೆ ಪ್ರಧಾನಿ ನರೇಂದ್ರ ಮೋದಿ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ನಾನು ಅಲ್ಲೇ ಖುಷಿಯಾಗಿ ಇದ್ದೇನೆ. ಮತಗಟ್ಟೆ ಸಮೀಕ್ಷೆ ಸುಳ್ಳಾಗುತ್ತದೆ ಎಂದು ಹೇಳಿದ್ದಾರೆ.

ನಾವು ಬಹುಮತದ ಸರ್ಕಾರ ಮಾಡುವ ವಿಶ್ವಾಸ ಇದ್ದು, ಬೂತ್ ಮಟ್ಟದ ಕಾರ್ಯಕರ್ತರ ವರದಿ ಪ್ರಕಾರ 120 ಕ್ಕೂ ಹೆಚ್ಚು ಸೀಟುಗಳಲ್ಲಿ ಮುಂದೆ ಇದ್ದೇವೆ. ಪ್ರಧಾನಿ ಮೋದಿ ರೋಡ್ ಶೋ ಮತದಾರರ ಮೇಲೆ ಪರಿಣಾಮ ಆಗಿದೆ. ಬಿಜೆಪಿಗೆ ಬಹುಮತ ಬರುತ್ತದೆ. ಈ ಬಾರಿ ನಾವು ಸರ್ಕಾರ ರಚಿಸುತ್ತೇವೆ ಎಂದಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Exit mobile version