Site icon PowerTV

ಶಿವಮೊಗ್ಗದಲ್ಲಿ ಭೀಕರ ಅಪಘಾತ, ಇಬ್ಬರು ಸಾವು

ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಚೋರಡಿ ಕುಂಸಿಯ ಸೇತುವೆ ಬಳಿ ಭೀಕರ ಅಪಘಾತ ಸಂಭವಿಸಿದೆ.

ಶಿವಮೊಗ್ಗ-ಸಾಗರ ರಸ್ತೆಯಲ್ಲಿ ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿವೆ. ಈ ದುರ್ಘಟನೆಯಲ್ಲಿ ಬಸ್ ನಲ್ಲಿದ್ದಂತ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಎಂದು ತಿಳಿದು ಬಂದಿದೆ.

ಬಸ್ ಅಪಘಾತದಲ್ಲಿ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಎರಡೂ ಬಸ್ ಗಳಲ್ಲಿ ಒಟ್ಟು 75ರಿಂದ 80 ಜನ ಪ್ರಯಾಣಿಕರು ಸಂಚರಿಸುತ್ತಿದ್ದರು.

ಅಪಘಾತದಲ್ಲಿ 2 ಸಾವು

ಬಸ್ ಗಳ ಮುಖಾಮುಖಿ ಡಿಕ್ಕಿ ವಿಚಾರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಖಚಿತ ಪಡಿಸಿದ್ದಾರೆ. ಬಸ್ ಚಾಲಕ ತಿಪ್ಪೆಸ್ವಾಮಿ ಹಾಗೂ ಮತ್ತೊಬ್ಬ 43 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. 34 ಜನರು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ.

ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ಕಾರು ಬೈಕ್ ನಡುವೆ‌ ಬೀಕರ‌ ರಸ್ತೆ ಅಪಘಾತ ಸಂಭವಿಸಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಲಹಂಕ ತಾಲೂಕಿನ ರಾಜಾನುಕುಂಟೆ ಕಾಕೋಳು ರಸ್ತೆಯ ಚಲ್ಲಹಳ್ಳಿ ಬಳಿ ಘಟನೆ ನಡೆದಿದೆ. ಚಲ್ಲಹಳ್ಳಿ ಗ್ರಾಮದ ರಾಮಯ್ಯ (39) ನಾಗರಾಜ್ (42) ಮೃತರು. ಅಪಘಾತದ ರಬಸಕ್ಕೆ ಬೈಕ್ ಮತ್ತು ಕಾರಿನ ಮುಂಬಾಗ ಜಖಂ ಆಗಿದೆ.

Exit mobile version