Site icon PowerTV

ಚುನಾವಣಾ ಬೆಟ್ಟಿಂಗ್ ​ಗಾಗಿ ಈ ಮಹಾನುಭಾವ ಪಣಕ್ಕಿಟ್ಟಿದ್ದು ಏನು ಗೊತ್ತಾ..?

ಮೈಸೂರು :  ಬೆಟ್ಟಿಂಗ್​ ಬೆಟ್ಟಿಂಂಗ್​.. ಎಲ್ಲಿ ಕೇಳಿದ್ದರು ಇದ್ದೇ ಹೆಸರು. ಚುನಾವಣೆ ಮುಕ್ತಯಗೊಂಡತ್ತೆ ರಾಜಕೀಯಯ ನಾಯಕರು ಆ ಪಕ್ಚ ಅಧಿಕಾರಕ್ಕೆ ಬರುತ್ತೆ ಈ ಪಕ್ಷ ಅಧಿಕಾರಕ್ಕೆ ಬರುತ್ತೆ ಎಂದು ಬೆಟ್ಟಿಂಗ್​ ಆಟ ಶುರುವಾಗಿದೆ.

ಹೌದು, ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ನಾಳೆ ಹೊರಬೀಳುತ್ತಿದ್ದು, ಇದೀಗ ರಾಜ್ಯದಲ್ಲಿ ಬೆಟ್ಟಿಂಗ್ ದಂಧೆ ಶುರುವಾಗಿದೆ.

ವ್ಯಕ್ತಿಯೊಬ್ಬರು ಬೆಟ್ಟಿಂಗ್‍ಗೆ ತನ್ನ ಜಮೀನನ್ನೇ ಮಾರಾಟ ಮಾಡಲು ಮುಂದಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಗ್ರಾಮದ ಯೋಗೇಶ್ ಗೌಡ ಜಮೀನು ಮಾರಲು ಮುಂದಾದ ಕಾಂಗ್ರೆಸ್ ಮುಖಂಡ. ಪಿರಿಯಾಪಟ್ಟಣ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಕೆ.ವೆಂಕಟೇಶ್ ಹಾಗೂ ಜೆಡಿಎಸ್ ಅಭ್ಯರ್ಥಿ ಕೆ.ಮಹದೇವ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆದಿದೆ.

ಇದನ್ನೂ ಓದಿ : ಶಿವಮೊಗ್ಗದಲ್ಲಿ ಭೀಕರ ಅಪಘಾತ, ಇಬ್ಬರು ಸಾವು

ಈ ಹಿನ್ನೆಲೆಯಲ್ಲಿ ಪಿರಿಯಾಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರೆಂದು 1 ಎಕರೆ 37 ಗುಂಟೆ ಜಮೀನು ಬೆಟ್ಟಿಂಗ್ ನಡೆದಿದೆ. ಸದ್ಯ ಯೋಗೇಶ್ ಗೌಡ ಮಾತನಾಡಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Exit mobile version