Site icon PowerTV

Karnataka Rains : ಮೋಕಾ ಚಂಡಮಾರುತ ಎಫೆಕ್ಟ್ ; 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ

ಬೆಂಗಳೂರು : ಮೋಕಾ ಚಂಡಮಾರುತ ಇಂದು ಒಡಿಶಾಗೆ ಅಪ್ಪಳಿಸಲಿದ್ದು, ಅದರ ಪ್ರಭಾವ ಸಾಕಷ್ಟು ರಾಜ್ಯಗಳ ಮೇಲಾಗಲಿದೆ .ಅದರಲ್ಲಿ ಕರ್ನಾಟಕ ಕೂಡ ಒಂದು. ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಎಲ್ಲೆಲ್ಲಿ ಮಳೆ..?

ಕರಾವಳಿಯ ಎಲ್ಲಾ ಜಿಲ್ಲೆಗಳು, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ, ಎಚ್​ಎಎಲ್​ನಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Exit mobile version