Site icon PowerTV

ಚುನಾವಣೆ ಮುಗಿದ ಬೆನ್ನಲ್ಲೇ ಪವರ್ ಶಾಕ್ : ಪ್ರತಿ ಯೂನಿಟ್ ಗೆ 70 ಪೈಸೆ ಹೆಚ್ಚಳ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಮತದಾನ ಮುಗಿದ ಬೆನ್ನಲ್ಲೇ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ವಿದ್ಯುಚ್ಛಿಕ್ತಿ ದರಗಳ ಪರಿಷ್ಕರಣೆಯನ್ನು ಅನುಮೋದಿಸಿದೆ.

ಪ್ರತಿ ಯೂನಿಟ್‌ಗೆ 70 ಪೈಸೆ ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಒಪ್ಪಿಗೆ ನೀಡಿದೆ.

ಏಪ್ರಿಲ್ 1ರಿಂದ ಪೂರ್ವಾನ್ವಯವಾಗುವಂತೆ ಪ್ರತಿ ಯೂನಿಟ್‌ ಮೇಲೆ 1.46 ರೂ. ಹೆಚ್ಚು ಮಾಡುವಂತೆ ಎಸ್ಕಾಂಗಳು ಬೇಡಿಕೆ ಸಲ್ಲಿಸಿದ್ದವು. ಹೊಸ ದರ ಜಾರಿ ಹಿನ್ನೆಲೆಯಲ್ಲಿ ಗ್ರಾಹಕರ ಪ್ರತಿ ತಿಂಗಳ ಬಿಲ್‌ನಲ್ಲಿ ಶೇ 8.31. ರಷ್ಟು ಹೆಚ್ಚಳವಾಗಲಿದೆ.

ಇದನ್ನೂ ಓದಿ : ಎಣ್ಣೆ ಪ್ರಿಯರೇ ಗಮನಿಸಿ.. ನಾಳೆ ಮದ್ಯ ಮಾರಾಟ ಬಂದ್

ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದೆ. ಆದರೆ, ಸದ್ಯದ ಸಮೀಕ್ಷೆಗಳ ಪ್ರಕಾರ ಅತಂತ್ರ ವಿಧಾನಸಭೆಯ ಮುನ್ಸೂಚನೆ ಲಭಿಸಿದ್ದು ನಾಳಿನ ಫಲಿತಾಂಶ ಕುತೂಹಲ ಕೆರಳಿಸಿದೆ.

ನಾಳೆ ಬೆ.8ಕ್ಕೆ ಮತ ಎಣಿಕೆ ಶುರು

ನಾಳೆ ಬೆಳಗ್ಗೆ 8 ಗಂಟೆಗೆ ರಾಜ್ಯಾದ್ಯಂತ ಏಕಕಾಲದಲ್ಲೇ ಮತ ಎಣಿಕೆ ಕಾರ್ಯ ಶುರುವಾಗಲಿದೆ. ಮಧ್ಯಾಹ್ನದ ವೇಳೆಗೆ ಬಹುತೇಕ ಕ್ಷೇತ್ರಗಳ ಚಿತ್ರಣ ಬಯಲಾಗಲಿದೆ. ಸಂಜೆ ಬಳಿಕ ಪೂರ್ಣ ಫಲಿತಾಂಶ ಸಿಗಲಿದೆ.

Exit mobile version