Site icon PowerTV

ಶಿಡ್ಲಘಟ್ಟ ಜನತೆಗೆ ಧನ್ಯವಾದ ತಿಳಿಸಿದ ಸೀಕಲ್ ರಾಮಚಂದ್ರಗೌಡ

ಬೆಂಗಳೂರು : ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಜಯಗಳಿಸಿದ ಜೆಡಿಎಸ್ ಪಕ್ಷದ ಅಭ್ಯರ್ಥಿಗೆ ಬಿಜೆಪಿ ಅಭ್ಯರ್ಥಿ ಸೀಕಲ್‌ ರಾಮಚಂದ್ರಗೌಡ ಅವರು ಅಭಿನಂದನೆ ತಿಳಿಸಿದ್ದಾರೆ.

ಈ ಕುರಿತುಪ್ ಪ್ರತಿಕ್ರಿಯೆ ನೀಡಿರುವ ಅವರು, ತೀರ ಕಡಿಮೆ ಸಮಯದಲ್ಲಿ ನನಗೆ ಅಪಾರ ಬೆಂಬಲ ಮತ್ತು ಪ್ರೀತಿ ನೀಡಿದ ಶಿಡ್ಲಘಟ್ಟದ ಜನತೆ ಧನ್ಯವಾದ ಎಂದಿದ್ದಾರೆ.

ಈ ಬೆಂಬಲ ನನಗೆ ಮುಂದಿನ 5 ವರ್ಷಗಳಲ್ಲಿ ಮತ್ತಷ್ಟು ಕೆಲಸ ಮತ್ತು ನಿಮ್ಮ ಪ್ರೀತಿ ಸಂಪಾದಿಸಲು ಅವಕಾಶ ಮಾಡಿಕೊಟ್ಟಿದೆ. ನಿಮ್ಮ ಪ್ರೀತಿ ಮತ್ತು ಅಭಿಮಾನ ಗಳಿಸಿರುವುದು ನನ್ನ ಮೊದಲನೇ ಗೆಲುವು. ಈ ಪ್ರೀತಿ ಮತ್ತು ನಂಬಿಕೆಗೆ ನಾನು ಎಂದೆಂದಿಗೂ ಚಿರಋಣಿ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಮುನ್ನಡೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಮತ್ತೊಮ್ಮೆ ಪುನರಾಗಮಿಸುತ್ತೇವೆ

ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ನಾವು ರಾಜ್ಯದ ಜನತೆಯ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ. ನಾವು ನಮ್ಮ ತಪ್ಪುಗಳನ್ನು ವಿಶ್ಲೇಷಿಸಿ, ಸರಿಪಡಿಸಿಕೊಂಡು, ಪಕ್ಷವನ್ನು ಪುನಃ ಸಂಘಟಿಸುತ್ತೇವೆ. ಲೋಕಸಭಾ ಚುನಾವಣೆಯ ವೇಳೆಯಲ್ಲಿ ಮತ್ತೊಮ್ಮೆ ಪುನರಾಗಮಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Exit mobile version