Site icon PowerTV

ಈ ಸೋಲು ಬಿಜೆಪಿಗೆ ಹೊಸದೇನಲ್ಲ : ಯಡಿಯೂರಪ್ಪ

ಬೆಂಗಳೂರು : ಬಿಜೆಪಿ ಪಕ್ಷಕ್ಕೆ ಈ ಸೋಲು ಹೊಸದೇನಲ್ಲ. ರಾಜ್ಯದ ಜನರ(ಮತದಾರರ) ತೀರ್ಪನ್ನು ನಾವು ಗೌರವದಿಂದ ಸ್ವೀಕರಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಚುನಾವಣಾ ಸೋಲಿನ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾವು ಎರಡು ಸ್ಥಾನದಿಂದ ರಾಜ್ಯದಲ್ಲಿ ಸರ್ಕಾರ ರಚಿಸಿದ್ದೆವು. ಇದರಿಂದ ಪಕ್ಷದ ಕಾರ್ಯಕರ್ತರು ದೃತಿಗೆಡಬಾರದು ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಹೊರತಾಗಿಯೂ ಪಕ್ಷಕ್ಕೆ ಹಿನ್ನಡೆಯಾಗಿದೆ. ಈ ಬಾರಿಯ ಚುನಾವಣಾ ಫಲಿತಾಂಶದ ಬಗ್ಗೆ ಸಮಾಲೋಚನೆ ನಡೆಸುತ್ತೇವೆ ಎಂದು ಬಿ.ಎಸ್​ ಯಡಿಯೂರಪ್ಪ ಹೇಳಿದ್ದಾರೆ.

ಸೋಲಿನ ಹೊಣೆ ನಾನೆ ಹೊತ್ತಿಕೊಳ್ಳುವೆ

ಇನ್ನೂ ರಾಜ್ಯ ವಿಧಾಸಭಾ ಚುನಾವಣಾ ಫಲಿತಾಂಶದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್​ ಕುಮಾರ್​ ಕಟೀಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.  ಸೋಲಿನ ಹೊಣೆ ನಾನೆ ಹೊತ್ತಿಕೊಳ್ಳುವೆ ಎಂದಿದ್ದಾರೆ.

ಇದನ್ನೂ ಓದಿ : ‘ಅಬ್ ಕಿ ಬಾರ್ ಡಿಕೆ’ ಸರ್ಕಾರ್ : ಬೆಂಬಲಿಗರ ಘೋಷಣೆ

ರಾಜ್ಯದ ಜನರ ತೀರ್ಮಾನವನ್ನು ನಾನು ಗೌರವಿಸುತ್ತೇನೆ. ಸೋಲಿನ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತೇನೆ. ಪಕ್ಷ ಸಂಘಟನೆ ಮಾಡುತ್ತೇವೆ. ಬರುವ ಲೋಕಸಭಾ ಚುನಾವಣೆ ಸಂಬಂಧ ಮತ್ತಷ್ಟು ಪಕ್ಷ ಸಂಘಟನೆ ಕೆಲಸ ಮಾಡುತ್ತೇನೆ ಎಂದು ಕಟೀಲ್​ ಹೇಳಿದ್ದಾರೆ.

ಮತ್ತೊಮ್ಮೆ ಪುನರಾಗಮಿಸುತ್ತೇವೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫಲಿತಾಂಶದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ‘ನಾವು ಕರ್ನಾಟಕದ ಜನತೆಯ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ. ನಾವು ನಮ್ಮ ತಪ್ಪುಗಳನ್ನು ವಿಶ್ಲೇಷಿಸಿ, ಸರಿಪಡಿಸಿಕೊಂಡು, ಪಕ್ಷವನ್ನು ಪುನಃ ಸಂಘಟಿಸಿ, ಸಂಸತ್ ಚುನಾವಣೆಯ ವೇಳೆಯಲ್ಲಿ ಮತ್ತೊಮ್ಮೆ ಪುನರಾಗಮಿಸುತ್ತೇವೆ’ ಎಂದು ಬರೆದುಕೊಂಡಿದ್ದಾರೆ.

Exit mobile version