Site icon PowerTV

ಐಪಿಎಲ್​ ಪ್ರಿಯರಿಗೆ ಇಂದು ಡಬಲ್​ ಧಮಾಕ

ಬೆಂಗಳೂರು : ಇಂದು ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಾಜಸ್ಥಾನ್ ರಾಯಲ್ಸ್ ಸವಾಲೊಡ್ಡುತ್ತಿದೆ. ಹಾಗೂ ಚೈನೈ ಸೂಪರ್​ ಕಿಂಗ್​ ಕೋಲ್ಕತ್ತಾ ನೈಟ್​ ರೈಡರ್ಸ್ ನಡುವೆ ಪಂದ್ಯ ನಡೆಯಲಿದ್ದು,ಐಪಿಎಲ್​​ ಪ್ರಿಯರಿಗೆ ಮನೋರಂಜನೆ ಮತ್ತಷ್ಟು ಜಾಸ್ತಿಯಾಗಲಿದೆ.

ಹೌದು, ಇಂದು 3 : 30ಕ್ಕೆ  ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಮತ್ತು ಫಾಫ್ ಡುಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RR vs RCB) ಮುಖಾಮುಖಿ ಆಗಲಿದೆ.

ಇನ್ನೂ ಸಂಜೆ 7 :30ಕ್ಕೆ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಎಂಎಸ್ ಧೋನಿ ಅವರ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್  (CSK vs KKR) ಅನ್ನು ಎದುರಿಸಲಿದೆ. ಉಭಯ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಇಂದು ಪಂದ್ಯವಾಗಿದೆ.

 

Exit mobile version