Site icon PowerTV

ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ನಾವು ಬಿಲ್ ಕಟ್ಟಲ್ಲ : ಆವಾಜ್ ಹಾಕಿದಿ ಗ್ರಾಮಸ್ಥರು

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಇನ್ನೇನು ಸಿಎಂ ಆಯ್ಕೆ ಹಾಗೂ ಸರ್ಕಾರ ರಚನೆಯೊಂದೇ ಬಾಕಿ. ಆದರೆ, ಸರ್ಕಾರ ರಚನೆಗೂ ಮುನ್ನವೇ ನಮ್ಮದೇ ಸರ್ಕಾರ ಎಂದು ಬೀಗುತ್ತಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ನಾವು ಬಿಲ್ ಕಟ್ಟಲ್ಲ ಎಂದು ಬೆಸ್ಕಾಂ ಮೀಟರ್ ರೀಡರ್​ಗೆ ಆವಾಜ್ ಹಾಕಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗದ ಜಾಲಿಕಟ್ಟೆಯಲ್ಲಿ ವಿದ್ಯುತ್ ಬಿಲ್ ಪಾವತಿಸಲು ಜನರು ನಿರಾಕರಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ನಾವು ಬಿಲ್ ಕಟ್ಟಲ್ಲ ಎಂದು ಬೆಸ್ಕಾಂ ಮೀಟರ್ ರೀಡರ್ ಗೆ ಗ್ರಾಮಸ್ಥರು ಆವಾಜ್ ಹಾಕಿದ್ದಾರೆ. ಈ ಇದೀಗ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ : ಹಸ್ತದ ಗುರುತು ಹೇರ್ ಕಟಿಂಗ್ ಮಾಡಿಸಿಕೊಂಡ ಕೈ ಅಭಿಮಾನಿ

ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಬೇಕು ಎಂದು ಕಾಂಗ್ರೆಸ್ ಪಕ್ಷ 5 ಗ್ಯಾರಂಟಿಗಳನ್ನು ಘೋಷಿಸಿತ್ತು. ಇದರಲ್ಲಿ ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ಗ್ಯಾರೆಂಟಿಯೂ ಇತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಅವರು, ನಮ್ಮ ಗ್ಯಾರಂಟಿಗಳು ಜಾರಿಗೆ ಬರುವುದು ಶತಸಿದ್ದ. ಜೂನ್ 1ರಿಂದ ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಘೋಷಣೆ ಮಾಡಿದ್ದರು. ಈ ಬೆನ್ನಲ್ಲೇ ಚಿತ್ರದುರ್ಗದಲ್ಲಿ ಈ ಘಟನೆ ನಡೆದಿದೆ.

ಡಿಕೆಶಿಗೆ ಸಿಎಂ ಶುಭಾಶಯ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರಿಗೆ ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ. ಕರೆ ಮಾಡಿ ಶುಭ ಕೋರಿದ್ದಾರೆ.

Exit mobile version